ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಬ್ಲ್ಯುಎಫ್‌ ರ‍್ಯಾಂಕಿಂಗ್‌: ಸಿಂಧು ಸ್ಥಾನ ಕುಸಿತ

Last Updated 28 ಮಾರ್ಚ್ 2023, 19:12 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತದ ಪಿ.ವಿ. ಸಿಂಧು ಅವರು ಬಿಡಬ್ಲ್ಯುಎಫ್‌ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರ 10ರೊಳಗಿನ ಪಟ್ಟಿಯಿಂದ ಹೊರಬಿದ್ದಿದ್ದಾರೆ.

ಮಂಗಳವಾರ ಪ್ರಕಟವಾದ ಮಹಿಳೆಯರ ಸಿಂಗಲ್ಸ್‌ ಕ್ರಮಾಂಕದಲ್ಲಿ ಅವರು 11ನೇ ಸ್ಥಾನದಲ್ಲಿದ್ದಾರೆ. ಇತ್ತೀಚಿಗೆ ನಿರೀಕ್ಷಿತ ಸಾಮರ್ಥ್ಯ ತೋರುವಲ್ಲಿ ವಿಫಲವಾಗುತ್ತಿರುವ ಸಿಂಧು, ಕಳೆದ ವಾರ ನಡೆದ ಸ್ವಿಸ್‌ ಓಪನ್ ಟೂರ್ನಿಯಲ್ಲೂ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. 27 ವರ್ಷದ ಆಟಗಾರ್ತಿಯ ಬಳಿ ಸದ್ಯ 60,448 ಪಾಯಿಂಟ್‌ಗಳಿವೆ.

ಒಂದು ಸಂದರ್ಭದಲ್ಲಿ ಜೀವನಶ್ರೇಷ್ಠ ಎರಡನೇ ರ್‍ಯಾಂಕ್‌ನಲ್ಲಿ ಇದ್ದ ಸಿಂಧು, 2016ರ ನವೆಂಬರ್‌ನಿಂದ ಅಗ್ರ 10ರೊಳಗಿನವರ ಪಟ್ಟಿಯಲ್ಲಿದ್ದರು.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಎಚ್‌.ಎಸ್‌. ಪ್ರಣಯ್‌ ಎಂಟನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಕಿದಂಬಿ ಶ್ರೀಕಾಂತ್ ಮತ್ತು ಲಕ್ಷ್ಯ ಸೇನ್‌ ಕ್ರಮವಾಗಿ 21 ಮತ್ತು 25ನೇ ಸ್ಥಾನದಲ್ಲಿದ್ದಾರೆ.

ಸ್ವಿಸ್‌ ಓಪನ್ ಚಾಂಪಿಯನ್‌ಗಳಾದ ಸಾತ್ವಿಕ್‌ಸಾಯಿರಾಜ್ ರಣಕಿರೆಡ್ಡಿ– ಚಿರಾಗ್ ಶೆಟ್ಟಿ ಡಬಲ್ಸ್ ವಿಭಾಗದಲ್ಲಿ ಆರನೇ ಕ್ರಮಾಂಕದಲ್ಲಿ ಮುಂದುವರಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT