ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಬ್ಯಾಡ್ಮಿಂಟನ್‌: ಅಕ್ಸೆಲ್ಸೆನ್‌, ಅಕಾನೆಗೆ ಪ್ರಶಸ್ತಿ

Last Updated 29 ಆಗಸ್ಟ್ 2022, 3:00 IST
ಅಕ್ಷರ ಗಾತ್ರ

ಟೋಕಿಯೊ: ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲ್ಸೆನ್ ಮತ್ತು ಜಪಾನ್‌ನ ಅಕಾನೆ ಯಾಮಗುಚಿ ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಕ್ರಮವಾಗಿ ಪುರುಷರ ಮತ್ತು ಮಹಿಳಾ ಸಿಂಗಲ್ಸ್ ವಿಭಾಗಗಳಲ್ಲಿ ಪ್ರಶಸ್ತಿ ಜಯಿಸಿದ್ದಾರೆ.

ಭಾನುವಾರ ಇಲ್ಲಿ ನಡೆದ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಅಕ್ಸೆಲ್ಸೆನ್‌ 21–5, 21–16ರಿಂದ ಥಾಯ್ಲೆಂಡ್‌ನ ಕುನ್ಲಾವುತ್‌ ವಿತಿದ್ಸರ್ನ್‌ ಅವರನ್ನು ಪರಾಭವಗೊಳಿಸಿದರು.

ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ಅಕ್ಸೆಲ್ಸೆನ್ ಈ ಹಣಾಹಣಿಯ ಮೊದಲ ಗೇಮ್‌ನಲ್ಲಿ ಸಂಪೂರ್ಣ ಪಾರಮ್ಯ ಮೆರೆದರು. ಎರಡನೇ ಗೇಮ್‌ ನಲ್ಲಿ ಮಾತ್ರ 21 ವರ್ಷದ ವಿತಿದ್ಸನ್ ಒಂದಷ್ಟು ಹೋರಾಟ ತೋರಿದರು.

2017ರಲ್ಲಿ ಗ್ಲಾಸ್ಗೊದಲ್ಲಿ ನಡೆದ ವಿಶ್ವಚಾಂಪಿಯನ್‌ಷಿಪ್‌ನಲ್ಲಿ ಅಕ್ಸೆಲ್ಸೆನ್‌ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದರು.

ಅಕಾನೆಗೆ ಕಿರೀಟ: ಒಲಿಂಪಿಕ್ಸ್‌ ಚಾಂಪಿಯನ್‌, ಚೀನಾದ ಚೆನ್‌ ಯುಫೆ ಸವಾಲು ಮೀರಿದ ಅಕಾನೆ ಯಾಮಗುಚಿ ಮಹಿಳಾ ವಿಭಾಗದಲ್ಲಿ ಚಾಂಪಿಯನ್ ಪಟ್ಟ ಧರಿಸಿದರು. ಫೈನಲ್ ಪಂದ್ಯದಲ್ಲಿ ಅಕಾನೆ ಅವ ರಿಗೆ21-12, 10-21, 21-14ರಿಂದ ಜಯ ಒಲಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT