ಗುರುವಾರ , ಮೇ 26, 2022
23 °C

ಬ್ಯಾಡ್ಮಿಂಟನ್‌: ವಿಶ್ವಚಾಂಪಿಯನ್‌ಷಿಪ್‌ನಿಂದ ಹಿಂದೆ ಸರಿದ ಮರಿನ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮೂರು ಬಾರಿಯ ಚಾಂಪಿಯನ್‌, ಸ್ಪೇನ್‌ನ ಕರೋಲಿನಾ ಮರಿನ್ ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಿಂದ ಹಿಂದೆ ಸರಿದಿದ್ದಾರೆ.

ಮೊಣಕಾಲು ಗಾಯದಿಂದ ಬಳಲುತ್ತಿರುವ ಅವರು ಸಂಪೂರ್ಣವಾಗಿ ಫಿಟ್‌ ಆಗದ ಕಾರಣ ಈ ನಿರ್ಧಾರ ತಳೆದಿದ್ದಾರೆ. ರಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತೆ ಮರಿನ್‌, ಸ್ವಿಸ್‌ ಓಪನ್‌ನಲ್ಲಿ ಗಾಯಗೊಂಡ ಕಾರಣ ಈ ವರ್ಷದ ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಷಿಪ್‌ನಲ್ಲೂ ಆಡಿರಲಿಲ್ಲ.

28 ವರ್ಷದ ಆಟಗಾರ್ತಿ, ಸ್ವದೇಶದಲ್ಲಿ ಇದೇ 12ರಿಂದ ನಡೆಯಲಿರುವ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕಣಕ್ಕಿಳಿಯುವುದಾಗಿ ಈ ಹಿಂದೆ ಹೇಳಿದ್ದರು.

ವಿಶ್ವಚಾಂಪಿಯನ್‌ಷಿಪ್‌ನಲ್ಲಿ ಎರಡು ಬಾರಿ ಚಿನ್ನ ಗೆದ್ದಿರುವ ಜಪಾನ್‌ನ ಕೆಂಟೊ ಮೊಮೊಟಾ ಕೂಡ ಈ ಬಾರಿ ಆಡುತ್ತಿಲ್ಲ. ಬೆನ್ನುನೋವಿನಿಂದ ಅವರು ಬಳಲುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು