ಸೋಮವಾರ, ಮೇ 16, 2022
30 °C

ಕೈರೊಸ್ ಕಪ್ ಹಾಕಿ ಟೂರ್ನಿ: ಕೆನರಾ ಬ್ಯಾಂಕ್ ತಂಡಕ್ಕೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆನರಾ ಬ್ಯಾಂಕ್ ತಂಡವು ರೋಚಕ ಹಣಾಹಣಿಯಲ್ಲಿ ಟೀಮ್ ಕೂರ್ಗ್ ಗಲ್ಫ್ ತಂಡವನ್ನು ಮಣಿಸಿ ಕೈರೊಸ್ ಕಪ್ ಹಾಕಿ ಫೈವ್ ಎ ಸೈಡ್‌ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿತು.

ಶಾಂತಿನಗರದ ಕೆ.ಎಂ.ಕಾರ್ಯಪ್ಪ ಅರೆನಾದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಕೆನರಾ ಬ್ಯಾಂಕ್‌ ತಂಡ 6–5ರಿಂದ ಪೆನಾಲ್ಟಿ ಶೂಟೌಟ್‌ನಲ್ಲಿ ಗೆದ್ದಿತು. ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಉಭಯ ತಂಡಗಳು 3–3 ಗೋಲುಗಳ ಸಮಬಲ ಸಾಧಿಸಿದ್ದವು. ಹೀಗಾಗಿ ಫಲಿತಾಂಶ ನಿರ್ಧರಿಸಲು ಶೂಟೌಟ್‌ ಮೊರೆ ಹೋಗಲಾಯಿತು.

ಶೂಟೌಟ್‌ನಲ್ಲಿ ಕೆನರಾ ಮೂರು ಬಾರಿ ಯಶಸ್ಸು ಸಾಧಿಸಿತು. ಟೀಮ್ ಕೂರ್ಗ್ ಗಲ್ಫ್ ಕೇವಲ ಎರಡು ಬಾರಿ ಚೆಂಡನ್ನು ಗೋಲುಪೆಟ್ಟಿಗೆಗೆ ಸೇರಿಸಿತು.

ಸೆಮಿಫೈನಲ್ ಪಂದ್ಯದಲ್ಲಿ ಕೆನರಾ ಬ್ಯಾಂಕ್ ತಂಡವು 3–2ರಿಂದ ಡಿವೈಇಎಸ್‌ ‘ಎ‘ ತಂಡವನ್ನು ಸೋಲಿಸಿತ್ತು. ಕೂರ್ಗ್ ಗಲ್ಫ್‌ 5–1ರಿಂದ ಫಾಲ್ಕನ್ ಹಾಕಿ ಕ್ಲಬ್ ತಂಡವನ್ನು ಸೋಲಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು