ಮಂಗಳವಾರ, ಆಗಸ್ಟ್ 3, 2021
21 °C

ಎಲ್ಲ ಅಂತರರಾಷ್ಟ್ರೀಯ ಕ್ರೀಡಾಕೂಟಗಳನ್ನು ರದ್ದು ಮಾಡಿದ ಚೀನಾ

ಎಪಿ Updated:

ಅಕ್ಷರ ಗಾತ್ರ : | |

Prajavani

ಬೀಜಿಂಗ್ : ಈ ವರ್ಷದ ಎಲ್ಲ ಅಂತರರಾಷ್ಟ್ರೀಯ ಕ್ರೀಡಾಕೂಟಗಳ ಆಯೋಜನೆಯನ್ನು ಚೀನಾ ರದ್ದು ಮಾಡಿದೆ.

ಆದರೆ, ಬೀಜಿಂಗ್‌ನಲ್ಲಿ 2022ರಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್‌ ನ ಆಯ್ಕೆ ಟ್ರಯಲ್ಸ್‌ ಅನ್ನು ಝಾಂಗ್ಜಿಯಾಕೌ ನಲ್ಲಿ ನಡೆಸಲಿದೆ.

ಈ ವರ್ಷ ಚೀನಾ, ಆರು ಡಬ್ಲ್ಯುಟಿಎ ಟೆನಿಸ್ ಟೂರ್ನಿಗಳು, ನಾಲ್ಕು ಎಟಿಪಿ ಟೂರ್ನಿಗಳನ್ನು ಆಯೋಜಿಸಬೇಕಿತ್ತು. 

ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಮೊದಲಿಗೆ ಪತ್ತೆಯಾಗಿತ್ತು  ಅಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮಂದಿ ಅಸುನೀಗಿದ್ದರು.  ಈಗಲೂ ಚೀನಾದ ಹಲವೆಡೆ ಈ ವೈರಸ್‌ನ ಉಪಟಳ ಇದೆ. ಅಲ್ಲದೇ ಭಾರತ, ಅಮೆರಿಕ, ಇಟಲಿ, ಇಂಗ್ಲೆಂಡ್, ರಷ್ಯಾಗಳಲ್ಲಿಯೂ ತಾಂಡವವಾಡುತ್ತಿದೆ. ಆದ್ದರಿಂದ ವಿದೇಶದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ.  ಈ ಹಿನ್ನೆಲೆಯಲ್ಲಿ ಚೀನಾ ಈ ನಿರ್ಧಾರವನ್ನು ತೆಗೆದುಕೊಂಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು