ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲಿಂಪಿಕ್ಸ್‌: ಕ್ರೀಡಾಪಟುಗಳಿಗೆ ಚೀನಾದಿಂದ ಲಸಿಕೆ

Last Updated 11 ಮಾರ್ಚ್ 2021, 16:12 IST
ಅಕ್ಷರ ಗಾತ್ರ

ಟೋಕಿಯೊ: ಈ ವರ್ಷದ ಒಲಿಂಪಿಕ್ಸ್ ಮತ್ತು ಮುಂದಿನ ವರ್ಷ ಬೀಜಿಂಗ್‌ನಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಲಸಿಕೆ ನೀಡಲು ಚೀನಾ ಒಲಿಂಪಿಕ್ ಸಮಿತಿ ಮುಂದಾಗಿದೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಗುರುವಾರ ತಿಳಿಸಿದೆ.

ಟೋಕಿಯೊದಲ್ಲಿ ಕಳೆದ ವರ್ಷ ನಡೆಯಬೇಕಾಗಿದ್ದ ಒಲಿಂಪಿಕ್ ಕೂಟವನ್ನು ಕೋವಿಡ್‌–19ರ ಕಾರಣದಿಂದ ಮುಂದೂಡಲಾಗಿದ್ದು ಈ ವರ್ಷದ ಜುಲೈ 23ರಿಂದ ಆಗಸ್ಟ್ ಎಂಟರ ವರೆಗೆ ನಡೆಸಲು ನಿರ್ಧರಿಸಲಾಗಿದೆ. ಚಳಿಗಾಲದ ಒಲಿಂಪಿಕ್ಸ್‌ ಮುಂದಿನ ವರ್ಷದ ಫೆಬ್ರುವರಿಯಲ್ಲಿ ನಡೆಯಲಿದೆ.

‘ಎರಡೂ ಒಲಿಂಪಿಕ್ಸ್‌ಗಳಲ್ಲಿ ಪಾಲ್ಗೊಳ್ಳುವವರಿಗಾಗಿ ಹೆಚ್ಚುವರಿ ಲಸಿಕೆ ತಯಾರಿಸಲು ಚೀನಾ ಮುಂದಾಗಿದೆ’ ಎಂದು ತಿಳಿಸಿದ ಐಒಸಿ ಅಧ್ಯಕ್ಷ ಥಾಮಸ್ ಬಾಕ್ ಎಷ್ಟು ಮಂದಿಗೆ ಲಸಿಕೆ ಸಿಗಲಿದೆ ಎಂಬ ಮಾಹಿತಿ ನೀಡಲಿಲ್ಲ.

ಒಲಿಂಪಿಕ್ಸ್‌ನಲ್ಲಿ ಸಾಮಾನ್ಯವಾಗಿ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು, ಸಾವಿರಾರು ಸಂಖ್ಯೆಯಲ್ಲಿ ಕೋಚ್‌ಗಳು, ಮಾಧ್ಯಮದವರು, ಅಧಿಕಾರಿಗಳು ಮತ್ತು ಸ್ವಯಂಸೇವಕರು ಇರುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT