ಬುಧವಾರ, ಫೆಬ್ರವರಿ 19, 2020
16 °C

ಅಗ್ರ 10ರಲ್ಲಿ ಸಾತ್ವಿಕ್‌–ಚಿರಾಗ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ಭಾರತದ ಬ್ಯಾಡ್ಮಿಂಟನ್‌ ಡಬಲ್ಸ್ ಜೋಡಿ ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ–ಚಿರಾಗ್‌ ಶೆಟ್ಟಿ ಅವರು ಬಿಡಬ್ಲ್ಯುಎಫ್‌ ರ‍್ಯಾಂಕಿಂಗ್‌ನಲ್ಲಿ ಅಗ್ರ 10ರ ಗಡಿಯೊಳಗೆ ಮರಳಿದ್ದಾರೆ.

ಎರಡು ಸ್ಥಾನ ಏರಿಕೆ ಕಂಡಿರುವ ಈ ಜೋಡಿ ಸದ್ಯ 9ನೇ ಕ್ರಮಾಂಕದ ಲ್ಲಿದೆ. ಹೋದ ವಾರ ಇವರಿಬ್ಬರು ಫ್ರೆಂಚ್‌ ಓಪನ್ ಟೂರ್ನಿಯಲ್ಲಿ ಫೈನಲ್‌ ತಲುಪಿದ್ದರು. ಇದರೊಂದಿಗೆ ಬಿಡಬ್ಲ್ಯುಎಫ್‌ ವಿಶ್ ಟೂರ್‌ ಸೂಪರ್‌ 750 ಟೂರ್ನಿಯೊಂದರಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಜೋಡಿ ಎನಿಸಿಕೊಂಡಿದ್ದರು.

ಈ ವರ್ಷದ ಆಗಸ್ಟ್‌ನಲ್ಲಿ ಸಾತ್ವಿಕ್‌–ಚಿರಾಗ್‌ ಮೊದಲ ಬಾರಿ ಅಗ್ರ 10ರೊಳಗಿನ ರ‍್ಯಾಂಕಿಂಗ್‌ಗೆ ಲಗ್ಗೆಯಿಟ್ಟಿದ್ದರು.

ಸಿಂಗಲ್ಸ್ ಆಟಗಾರ್ತಿಯರಾದ ಪಿ.ವಿ.ಸಿಂಧು ಹಾಗೂ ಸೈನಾ ನೆಹ್ವಾಲ್‌ ಕ್ರಮವಾಗಿ 6 ಮತ್ತು 9ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಲಕ್ಷ್ಯ ಸೇನ್‌ 51ನೇ ಸ್ಥಾನಕ್ಕೆ ಜಿಗಿದಿದ್ದರೆ, ಶುಭಂಕರ್ ಡೇ 38ನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು