ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಲ್‌ಇ ಫಿಜಿಯೋಥೆರಫಿ ಸಂಸ್ಥೆಯ ತಂಡ ಚಾಂಪಿಯನ್‌

Last Updated 26 ನವೆಂಬರ್ 2021, 16:14 IST
ಅಕ್ಷರ ಗಾತ್ರ

ಬೆಳಗಾವಿ: ಕೆಎಲ್ಇ ಫಿಜಿಯೋಥೆರಫಿ ಸಂಸ್ಥೆಯ ತಂಡದವರು ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ (ಕೆಎಎಚ್ಇಆರ್‌)ಯಿಂದ ಆಯೋಜಿಸಿದ್ದ 2021ನೇ ಸಾಲಿನ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಜನರಲ್‌ ಚಾಂಪಿಯನ್‌ಶಿಪ್‌ ತಮ್ಮದಾಗಿಸಿಕೊಂಡರು.

ಕೆಎಲ್‌ಇ ಫಾರ್ಮಸಿ ಕಾಲೇಜಿನ ಉತ್ಕರ್ಷ್‌ ಚವ್ಹಾಣ ಹಾಗೂ ದಿವ್ಯಾ ಪರ್ಸೇಕರ ಕ್ರಮವಾಗಿ ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ಅತ್ಯುತ್ತಮ ಅಥ್ಲೀಟ್‌ ಪ್ರಶಸ್ತಿ ಪಡೆದರು.

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಲೋಕಾಯುಕ್ತ ಎಸ್ಪಿ ಯಶೋದಾ ವಟಗೋಡಿ ವಿಜೇತರಿಗೆ ಬಹುಮಾನ ವಿತರಿಸಿದರು.

‘ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕಾಗಿ ಮತ್ತು ಆರೋಗ್ಯ ವೃದ್ಧಿಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.

652 ವಿದ್ಯಾರ್ಥಿಗಳು ಕೂಟದಲ್ಲಿ ಪಾಲ್ಗೊಂಡಿದ್ದರು.

ಅಧ್ಯಕ್ಷತೆ ವಹಿಸಿದ್ದ ಜೆಎನ್‌ಎಂಸಿ ಪ್ರಾಂಶುಪಾಲೆ ಡಾ.ನಿರಂಜನಾ ಎಸ್. ಮಹಾಂತಶೆಟ್ಟಿ ಮಾತನಾಡಿದರು.

ಕೆಎಎಚ್‌ಇಆರ್‌ನ ಉಪಕುಲಸಚಿವ ಡಾ.ಎಂ.ಎಸ್. ಗಣಾಚಾರಿ, ಕೆಎಲ್‌ಇ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ.ಸುನೀಲ ಜಲಾಲಪುರೆ, ಕೆಎಲ್‌ಇ ಹೋಮಿಯೋಪತಿ ಕಾಲೇಜಿನ ಪ್ರಾಚಾರ್ಯ ಡಾ.ಎಂ.ಎ. ಉಡಚನಕರ, ಬಿ.ಎಂ. ಕಂಕಣವಾಡಿ ಆಯುರ್ವೇದ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಪಿ.ಜಿ. ಜಾಡರ, ಕೆಎಎಚ್‌ಇಆರ್‌ನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕ ಡಾ.ರಂಜಿತ್ ಕಂಗಲೆ, ದೈಹಿಕ ಶಿಕ್ಷಣ ನಿರ್ದೇಶಕ ರವೀಂದ್ರ ಖೋತ್ ಇದ್ದರು.

ಬಿ.ಎಂ. ಕಂಕಣವಾಡಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಸುಹಾಸ್‌ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಆಯೋಜನಾ ಸಮಿತಿ ಅಧ್ಯಕ್ಷ ಡಾ.ವಿಶ್ವನಾಥ ವಾಸೇದಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT