ಮಂಗಳವಾರ, ಜುಲೈ 27, 2021
27 °C

ಒಲಿಂಪಿಕ್ಸ್‌: ರಾಜ್ಯದ ಕ್ರೀಡಾಪಟುಗಳಿಗೆ ತಲಾ ₹ 10 ಲಕ್ಷ ಪ್ರೋತ್ಸಾಹಧನ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಬುಧವಾರ ಸರ್ಕಾರದ ವತಿಯಿಂದ ತಲಾ ₹ 10 ಲಕ್ಷ ಪ್ರೋತ್ಸಾಹಧನ ವಿತರಿಸಿ, ಶುಭ ಹಾರೈಸಿದರು.

ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್‌ ವಿತರಿಸಿ ಮಾತನಾಡಿದ ಅವರು, ‘ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವವರಲ್ಲಿ ರಾಜ್ಯದ ಈಜುಪಟು ಶ್ರೀಹರಿ ನಟರಾಜ್‌, ಇಕ್ವೆಸ್ಟ್ರಿಯನ್‌ ಪಟು ಫವಾದ್ ಮಿರ್ಜಾ ಮತ್ತು ಗಾಲ್ಫ್‌ ಆಟಗಾರ್ತಿ ಅದಿತಿ ಅಶೋಕ್‌ ಇದ್ದಾರೆ’ ಎಂದರು.

‘ಮಂಡ್ಯ ನಗರದಲ್ಲಿರುವ ಕ್ರೀಡಾಂಗಣವನ್ನು ₹ 10 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಿ, ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುವುದು. ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತಯಾರಿ ನಡೆಸಲು ಅನುಕೂಲವಾಗುವಂತೆ ದೇವನಹಳ್ಳಿಯಲ್ಲಿ ಫುಟ್‌ಬಾಲ್‌, ಹಾಕಿ, ಶೂಟಿಂಗ್‌, ಈಜು, ಟೆನ್ನಿಸ್‌ ಕ್ರೀಡೆಗಳ ಅಂತರರಾಷ್ಟ್ರೀಯ ಮಟ್ಟದ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.

‘ಗ್ರಾಮೀಣ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ₹ 2 ಕೋಟಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಆರಂಭಿಸಲಾಗುವುದು’ ಎಂದು ಅವರು ವಿವರಿಸಿದರು.

ಈಜು ಪಟು ಶ್ರೀಹರಿ ನಟರಾಜ್‌ ಮತ್ತು ಅವರ ಕುಟುಂಬದ ಸದಸ್ಯರನ್ನು ಮುಖ್ಯಮಂತ್ರಿ ಸನ್ಮಾನಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು