ಗುರುವಾರ , ಆಗಸ್ಟ್ 18, 2022
25 °C
ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಪದಕ ಬೇಟೆ

CWG 2022: ಬಜರಂಗ್‌ಗೆ ಚಿನ್ನ, ಅನ್ಶುಗೆ ಬೆಳ್ಳಿ

ಪಿಟಿಐ Updated:

ಅಕ್ಷರ ಗಾತ್ರ : | |

ಬರ್ಮಿಂಗ್‌ಹ್ಯಾಮ್: ಭಾರತದ ಕುಸ್ತಿಪಟುಗಳಾದ ಬಜರಂಗ್‌ ಪೂನಿಯಾ ಮತ್ತು ಅನ್ಶು ಮಲಿಕ್‌ ಅವರು ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಗೆದ್ದರು.

ಶುಕ್ರವಾರ ನಡೆದ ಪುರುಷರ ಫ್ರೀಸ್ಟೈಲ್‌ ಕುಸ್ತಿಯ 65 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ಬಜರಂಗ್‌ ಅವರು ಕೆನಡಾದ ಲಾಕ್ಲನ್‌ ಮೆಕ್‌ಲೀನ್‌ ಎದುರು 9–2 ಪಾಯಿಂಟ್‌ಗಳಿಂದ ಗೆದ್ದರು.

ಬಜರಂಗ್‌ ಇದಕ್ಕೂ ಮುನ್ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ನ ಜಾರ್ಜ್‌ ರಾಮ್‌ ವಿರುದ್ದ 10–0 ರಲ್ಲಿ ಜಯ ಸಾಧಿಸಿದ್ದರು. ಮೊದಲ ಸುತ್ತಿನ ಹಣಾಹಣಿಯಲ್ಲಿ ನೌರು ದ್ವೀಪದ ಲೊವ್ ಬಿಂಗ್‌ಹ್ಯಾಮ್‌ ಅವರನ್ನು ಮಣಿಸಿದ್ದರೆ, ಕ್ವಾರ್ಟರ್‌ ಫೈನಲ್‌ನಲ್ಲಿ ಮಾರಿಷಸ್‌ನ ಜೀನ್ ಗಯ್ಲಿಯಾನ್ ಜೊರಿಸ್ ಅವರನ್ನು ಪರಾಭವಗೊಳಿಸಿದ್ದರು.

ಅನ್ಶು ಅವರು ಮಹಿಳೆಯರ 57 ಕೆ.ಜಿ. ಫ್ರೀಸ್ಟೈಲ್‌ ಕುಸ್ತಿ ಸ್ಪರ್ಧೆಯಲ್ಲಿ ಬೆಳ್ಳಿ ಜಯಿಸಿದರು. ಫೈನಲ್‌ನಲ್ಲಿ ಅವರು 3–7 ರಲ್ಲಿ ನೈಜೀರಿಯದ ಒಡುನಯೊ ಅಡೆಕುರೆಯೊ ಎದುರು ಸೋತರು.

ಅನ್ಶು ಅವರು ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ನಲ್ಲಿ 10–0 ರಲ್ಲಿ ಶ್ರೀಲಂಕಾದ ನೇತಮಿ ಪೊರುತೊತಗೆ ಅವರನ್ನು ಮಣಿಸಿದ್ದರು. ಕ್ವಾರ್ಟರ್ ಫೈನಲ್‌ನಲ್ಲಿ ಆಸ್ಟ್ರೇಲಿಯಾದ ಐರಿನಾ ಸೈಮೊನಿಡಿಸ್‌ ಎದುರು ಗೆದ್ದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು