ಬುಧವಾರ, ನವೆಂಬರ್ 30, 2022
16 °C

ಗಾಲ್ಫ್‌ನಲ್ಲಿ ಅದೃಷ್ಟ ಪರೀಕ್ಷೆಗಿಳಿದ ಮುರಳಿ ವಿಜಯ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ): ಭಾರತ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ತಮಿಳುನಾಡಿನ ಬ್ಯಾಟರ್‌ ಮುರಳಿ ವಿಜಯ್‌ ಅವರು ಗಾಲ್ಫ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಮಂಗಳವಾರ ಇಲ್ಲಿ ಆರಂಭವಾಗಲಿರುವ ಚೆನ್ನೈ ಓಪನ್‌ ಗಾಲ್ಫ್‌ ಚಾಂಪಿಯನ್‌ಷಿಪ್‌ನಲ್ಲಿ ಅಮೆಚೂರ್‌ ಆಟಗಾರನಾಗಿ ಅವರು ಕಣಕ್ಕಿಳಿಯಲಿದ್ದಾರೆ. ಹಿರಿಯ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್‌ ಅವರ ಪುತ್ರ ಅನಿರುದ್ಧ ಶ್ರೀಕಾಂತ್‌ ಅವರೂ ಅಮೆಚೂರ್‌ ಸ್ಪರ್ಧಿಯಾಗಿ ಪಾಲ್ಗೊಳ್ಳಲಿದ್ದಾರೆ.

ತಮಿಳುನಾಡು ಗಾಲ್ಫ್‌ ಫೆಡರೇಷನ್‌ ಕೋರ್ಸ್‌ನಲ್ಲಿ ನಡೆಯಲಿರುವ ಟೂರ್ನಿಯಲ್ಲಿ 123 ವೃತ್ತಿಪರ ಆಟಗಾರರು ಮತ್ತು ಮೂವರು ಅಮೆಚೂರ್‌ ಸ್ಪರ್ಧಿಗಳು ಕಣದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು