ಸೈಕ್ಲಿಂಗ್: ವೆಂಕಪ್ಪಗೆ ಪದಕ

ಹುಬ್ಬಳ್ಳಿ: ಉತ್ತಮ ಪ್ರದರ್ಶನ ಮುಂದುವರಿಸಿರುವ ಕರ್ನಾಟಕದ ವೆಂಕಪ್ಪ ಕೆಂಗಲಗುತ್ತಿ, ಜೈಪುರದಲ್ಲಿ ನಡೆ ಯುತ್ತಿರುವ 71ನೇ ರಾಷ್ಟ್ರೀಯ ಸೀನಿಯರ್ ಹಾಗೂ ಜೂನಿಯರ್ ಟ್ರ್ಯಾಕ್ ಸೈಕ್ಲಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಶನಿವಾರ ಬೆಳ್ಳಿ ಪದಕ ಜಯಿಸಿದರು.
ಬಾಗಲಕೋಟೆ ತಾಲ್ಲೂಕಿನ ತುಳಸಿಗೇರಿಯ ವೆಂಕಪ್ಪ 18 ವರ್ಷದ ಒಳಗಿನವರ 20 ಕಿ.ಮೀ. ಪಾಯಿಂಟ್ ರೇಸ್ ಸ್ಪರ್ಧೆಯಲ್ಲಿ ಒಟ್ಟು 42 ಅಂಕ ಕಲೆಹಾಕಿ ಈ ಬಾರಿಯ ಚಾಂಪಿ ಯನ್‌ಷಿಪ್‌ನಲ್ಲಿ ಮೂರನೇ ಪದಕದ ಒಡೆಯರಾದರು. ಈ ಮೊದಲು ನಾಲ್ಕು ಕಿ.ಮೀ. ವೈಯಕ್ತಿಕ ಪರ್ಸೂಟ್‌ನಲ್ಲಿ ಕಂಚು, ಮೂರು ಕಿ.ಮೀ. ವೈಯಕ್ತಿಕ ಪರ್ಸೂಟ್‌ನಲ್ಲಿ ಬೆಳ್ಳಿ ಗೆದ್ದಿದ್ದರು.
ರಾಜ್ಯದ ಸೈಕ್ಲಿಸ್ಟ್‌ಗಳು ಶನಿವಾರದ ಅಂತ್ಯಕ್ಕೆ ಒಟ್ಟು 14 ಪದಕಗಳನ್ನು ಜಯಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.