ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಕ್ಲಿಸ್ಟ್‌‌ ತ್ರಿಯಾಶಾ ಪಾಲ್‌ಗೆ ಕೋವಿಡ್‌

Last Updated 16 ಆಗಸ್ಟ್ 2020, 11:10 IST
ಅಕ್ಷರ ಗಾತ್ರ

ನವದೆಹಲಿ: ಸೈಕ್ಲಿಸ್ಟ್‌ ತ್ರಿಯಾಶಾ ಪಾಲ್‌ ಅವರಿಗೆ ಕೋವಿಡ್‌–19 ಸೋಂಕು ಇರುವುದು ದೃಢಪಟ್ಟಿದೆ. ರಾಷ್ಟ್ರೀಯ ಶಿಬಿರಕ್ಕೆ ಹಾಜರಾಗಲು ಇಲ್ಲಿಗೆ ಬಂದಿದ್ದ ಅವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯ ಅವರು ಪ್ರತ್ಯೇಕವಾಸದಲ್ಲಿದ್ದಾರೆ ಎಂದು ಭಾರತ ಕ್ರೀಡಾ ಪ್ರಾಧಿಕಾರ (ಸಾಯ್‌) ಭಾನುವಾರ ಹೇಳಿದೆ.

‘ಇಂದಿರಾ ಗಾಂಧಿ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಬೇಕಿರುವ ಸೈಕ್ಲಿಂಗ್‌ ಶಿಬಿರದಲ್ಲಿ ಪಾಲ್ಗೊಳ್ಳಲು ಆಗಸ್ಟ್‌ 12ರಂದು ಬಂದಿದ್ದ ತ್ರಿಯಾಶಾ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು ಕೋವಿಡ್‌ ಸೋಂಕು ಪತ್ತೆಯಾಗಿದೆ‘ ಎಂದು ಸಾಯ್‌ ತಿಳಿಸಿದೆ.

ಶಿಬಿರದಲ್ಲಿ ಪಾಲ್ಗೊಳ್ಳಲು 11 ಅಥ್ಲೀಟ್‌ಗಳು, 16 ಮಂದಿ ನೆರವು ಸಿಬ್ಬಂದಿ ಈ ತಿಂಗಳ ಆರಂಭದಲ್ಲಿ ಆಗಮಿಸಿದ್ದರು. ಅವರೆಲ್ಲರಿಗೂ ಕಡ್ಡಾಯ ಕೋವಿಡ್‌ ಟೆಸ್ಟ್‌ ನಡೆಸಲಾಗಿತ್ತು. ಅದರಲ್ಲಿ ಯಾರಿಗೂ ಸೋಂಕು ಪತ್ತೆಯಾಗಿರಲಿಲ್ಲ. ಸದ್ಯ ಅವರೆಲ್ಲರೂ ಕ್ವಾರಂಟೈನ್‌ನಲ್ಲಿದ್ದಾರೆ.

ಸೋಂಕಿತ ತ್ರಿಯಾಶಾ ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.

ರಾಷ್ಟ್ರೀಯ ಶಿಬಿರವು ಆಗಸ್ಟ್‌ 14ರಂದು ಆರಂಭವಾಗಬೇಕಿತ್ತು. ಸದ್ಯ ಅದು ವಿಳಂಬವಾಗಿದೆ.

‘ರಾಷ್ಟ್ರೀಯ ಶಿಬಿರವು ಇನ್ನಷ್ಟೇ ಶುರುವಾಗಬೇಕಿದೆ. ನಾಳೆ ನಡೆಯುವ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಭಾರತ ಸೈಕ್ಲಿಂಗ್‌ ಫೆಡರೇಷನ್‌ ಅಧ್ಯಕ್ಷ ಓಂಕಾರ್‌ ಸಿಂಗ್‌ ಹೇಳಿದ್ದಾರೆ.

‘ತ್ರಿಯಾಶಾ ಅವರು ಶಿಬಿರದಲ್ಲಿ ಪಾಲ್ಗೊಳ್ಳಲು ತಡವಾಗಿ ಆಗಮಿಸಿದರು. ಈಗ ಅವರಿಗೆ ಕೋವಿಡ್‌ನ ಯಾವುದೇ ಲಕ್ಷಣಗಳಿಲ್ಲ. ಅವರನ್ನು ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ’ ಎಂದು ಸಿಂಗ್‌ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT