ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುನೈಟೆಡ್‌ ವರ್ಲ್ಡ್‌ ರೆಸ್ಲಿಂಗ್‌: ದೀಪಕ್‌ ಪುನಿಯಾ ‘ಶ್ರೇಷ್ಠ ಕುಸ್ತಿಪಟು’

Last Updated 17 ಡಿಸೆಂಬರ್ 2019, 12:15 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ದೀಪಕ್‌ ಪುನಿಯಾ ಅವರು ಯುನೈಟೆಡ್‌ ವರ್ಲ್ಡ್‌ ರೆಸ್ಲಿಂಗ್‌ (ಯುಡಬ್ಲ್ಯುಡಬ್ಲ್ಯು) ನೀಡುವ ‘ವರ್ಷದ ಶ್ರೇಷ್ಠ ಜೂನಿಯರ್‌ ಫ್ರೀಸ್ಟೈಲ್‌ ಕುಸ್ತಿಪಟು’ ಗೌರವಕ್ಕೆ ಭಾಜನರಾಗಿದ್ದಾರೆ.

86 ಕೆ.ಜಿ.ವಿಭಾಗದಲ್ಲಿ ಸ್ಪರ್ಧಿಸುವ ದೀಪಕ್‌, ಈ ವರ್ಷದ ಆರಂಭದಲ್ಲಿ ನಡೆದಿದ್ದ ವಿಶ್ವ ಜೂನಿಯರ್‌ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು.

ಕಜಕಸ್ತಾನದ ನೂರ್‌ ಸುಲ್ತಾನ್‌ನಲ್ಲಿ ಸೆಪ್ಟೆಂಬರ್‌ನಲ್ಲಿ ನಡೆದಿದ್ದ ವಿಶ್ವ ಸೀನಿಯರ್‌ ಕುಸ್ತಿ ಚಾಂಪಿಯನ್‌ಷಿಪ್‌ ನಲ್ಲಿ ಬೆಳ್ಳಿಯ ಪದಕ ಜಯಿಸಿದ್ದ 18 ವರ್ಷದ ದೀಪಕ್, ಟೋಕಿಯೊ ಒಲಿಂಪಿಕ್ಸ್‌ಗೆ ರಹದಾರಿ ‍ಪಡೆದಿದ್ದರು.

86 ಕೆ.ಜಿ. ವಿಭಾಗದ ಯುಡಬ್ಲ್ಯುಡಬ್ಲ್ಯು ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ದೀಪಕ್‌, ಈ ವರ್ಷ ನಡೆದಿದ್ದ ಏಷ್ಯನ್‌ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕವನ್ನೂ ಗೆದ್ದಿದ್ದರು.

‘ವಿಶ್ವ ಶ್ರೇಷ್ಠ ಕುಸ್ತಿಪಟುಗಳನ್ನು ಹಿಂದಿಕ್ಕಿ ಪ್ರಶಸ್ತಿ ಪಡೆದಿರುವುದರಿಂದ ಅತೀವ ಖುಷಿಯಾಗಿದೆ. ಈ ಪ್ರಶಸ್ತಿ ಇನ್ನಷ್ಟು ಸಾಧನೆಗೆ ಪ್ರೇರಣೆಯಾಗಲಿದೆ’ ಎಂದು ದೀಪಕ್‌ ಸಂತಸ ವ್ಯಕ್ತಪಡಿಸಿದ್ದಾರೆ.

‘ಕೋಚ್‌ ಗೈಡರೋವ್‌ ಅವರು ನನ್ನ ತಪ್ಪುಗಳನ್ನು ಗುರುತಿಸಿ ತಿದ್ದುತ್ತಿದ್ದಾರೆ. ಜೊತೆಗೆ ಹೊಸ ತಂತ್ರಗಳನ್ನು ಹೇಳಿಕೊಡುತ್ತಿದ್ದಾರೆ. ಇದರಿಂದ ಮನೋಬಲ ಹೆಚ್ಚುತ್ತಿದೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನಿರ್ಭೀತಿಯಿಂದ ಆಡಿ ಪದಕ ಗೆಲ್ಲಲು ಪ್ರಯತ್ನಿಸುತ್ತೇನೆ’ ಎಂದು ಅವರು ನುಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT