ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಒಎಗೆ ಆಡಳಿತ ಸಮಿತಿ ನೇಮಕ

Last Updated 16 ಆಗಸ್ಟ್ 2022, 15:59 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಒಲಿಂಪಿಕ್‌ ಸಂಸ್ಥೆಯ (ಐಒಎ) ದೈನಂದಿನ ವ್ಯವಹಾರ ನೋಡಿಕೊಳ್ಳಲು ದೆಹಲಿ ಹೈಕೋರ್ಟ್‌ ಮಂಗಳವಾರ, ಆಡಳಿತ ಸಮಿತಿಯನ್ನು (ಸಿಒಎ) ನೇಮಿಸಿದೆ.

‘ರಾಷ್ಟ್ರೀಯ ಕ್ರೀಡಾ ನೀತಿಯನ್ನು ಜಾರಿಗೊಳಿಸದೇ ಇರುವುದಕ್ಕೆಐಒಎಯ ಆಡಳಿತವನ್ನು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ.ಆರ್.ದವೆ, ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೇಷಿ ಮತ್ತು ವಿದೇಶಾಂಗ ಇಲಾಖೆಯ ಮಾಜಿ ಕಾರ್ಯದರ್ಶಿ ವಿಕಾಸ್‌ ಸ್ವರೂಪ್‌ ಅವರನ್ನೊಳಗೊಂಡ ಸಿಒಎಗೆ ನೀಡಲಾಗಿದೆ’ ಎಂದು ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ.

‘ಐಒಎ ಕಾರ್ಯಕಾರಿ ಸಮಿತಿಯು ತನ್ನ ಎಲ್ಲ ಅಧಿಕಾರವನ್ನು ಸಿಒಎಗೆ ಹಸ್ತಾಂತರಿಸಬೇಕು’ ಎಂದು ನ್ಯಾಯಮೂರ್ತಿಗಳಾದ ಮನಮೋಹನ್‌ ಮತ್ತು ನಜ್ಮಿ ವಜೀರಿ ಅವರಿದ್ದ ಪೀಠ ಸೂಚಿಸಿದೆ.

ದೇಶದ ಯಶಸ್ವಿ ಕ್ರೀಡಾಪಟುಗಳಾದ ಶೂಟರ್‌ ಅಭಿನವ್‌ ಬಿಂದ್ರಾ, ಲಾಂಗ್‌ಜಂಪರ್‌ ಅಂಜು ಬಾಬಿ ಜಾರ್ಜ್‌ ಮತ್ತು ಆರ್ಚರಿ ಸ್ಪರ್ಧಿ ಬೊಂಬಯ್ಲ ದೇವಿ ಲೈಶ್ರಾಮ್‌ ಅವರು ಸಿಒಗೆ ಅಗತ್ಯ ಸಲಹೆಗಳನ್ನು ನೀಡಲಿದ್ದಾರೆ ಎಂದೂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT