ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ ಫೆಡರೇಷನ್: ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ದೆಹಲಿ ಹೈಕೋರ್ಟ್ ಸೂಚನೆ

Last Updated 11 ಫೆಬ್ರುವರಿ 2023, 4:55 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಅಮೆಚೂರ್ ಕಬಡ್ಡಿ ಫೆಡರೇಷನ್‌ಗೆ (ಎಕೆಎಫ್‌ಐ) ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ದೆಹಲಿ ಹೈಕೋರ್ಟ್‌ ಫೆಡರೇಷನ್‌ನ ಆಡಳಿತಗಾರರಿಗೆ ಸೂಚಿಸಿದೆ.

ಆಡಳಿತ ಮಂಡಳಿಯ ಸದಸ್ಯರ ‘ವಯಸ್ಸು ಮತ್ತು ಅಧಿಕಾರಾವಧಿಯ ನಿರ್ಬಂಧ’ ಸೇರಿದಂತೆ ಕೋರ್ಟ್‌ನ ನಿರ್ದೇಶನಗಳಿಗೆ ಅನುಗುಣವಾಗಿ ಚುನಾವಣೆ ಅಧಿಸೂಚನೆ ಹೊರಡಿ ಸಬೇಕು ಎಂದು ನ್ಯಾಯಾಲಯ ಹೇಳಿದೆ. ರಾಷ್ಟ್ರೀಯ ಕ್ರೀಡಾ ಸಂಹಿತೆಯು ಎಕೆಎಫ್‌ಐ ಮಾತ್ರವಲ್ಲದೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅದರ ಎಲ್ಲಾ ಅಂಗಸಂಸ್ಥೆಗಳಿಗೂ ಅನ್ವಯಿಸುತ್ತದೆ ಎಂದು ಕೋರ್ಟ್‌ ಹೇಳಿದೆ.

ಚುನಾವಣೆಗಳು ನಡೆಯಬೇಕಾಗಿರುವುದರಿಂದ, ಕ್ರೀಡಾ ಸಂಹಿತೆಯ ಅನುಷ್ಠಾನಕ್ಕೆ ಸಂಬಂಧಿಸಿದ ಐದು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಕೋರ್ಟ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT