ಬುಧವಾರ, ನವೆಂಬರ್ 13, 2019
28 °C

ಬಿಬಿಎಫ್‌ಐ ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್‌ ಆಯ್ಕೆ

Published:
Updated:
Prajavani

ಬೆಂಗಳೂರು: ಕರ್ನಾಟಕದ ದಿನೇಶ್‌ ಅವರು ಭಾರತ ಬಾಲ್‌ ಬ್ಯಾಡ್ಮಿಂಟನ್‌ ಫೆಡರೇಷನ್‌ನ (ಬಿಬಿಎಫ್‌ಐ) ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಹಾಸನದ ದಿನೇಶ್‌, ಮುಂದಿನ ನಾಲ್ಕು ವರ್ಷಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಕನ್ನಡಿಗ ಎಂಬ ಹಿರಿಮೆಗೂ ಭಾಜನರಾಗಿದ್ದಾರೆ.

ಬಾಲ್‌ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ ಆಫ್‌ ಕರ್ನಾಟಕದ ಕಾರ್ಯದರ್ಶಿ ಆಗಿರುವ ದಿನೇಶ್‌, ಈ ಹಿಂದೆ ರಾಷ್ಟ್ರೀಯ ಫೆಡರೇಷನ್‌ನ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ಪ್ರತಿಕ್ರಿಯಿಸಿ (+)