ಶನಿವಾರ, ಅಕ್ಟೋಬರ್ 8, 2022
23 °C

ಡೋಪಿಂಗ್: ಕುಸ್ತಿ ಆಯ್ಕೆ ಟ್ರಯಲ್ಸ್ ಆಯೋಜಕರಿಗೆ ನೋಟಿಸ್ –ಕ್ರೀಡಾ ಸಚಿವ ನಾರಾಯಣಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಗಾಗಿ ಹರಿಹರದಲ್ಲಿ ಇತ್ತೀಚೆಗೆ ನಡೆದಿದ್ದ ರಾಜ್ಯ ತಂಡದ ಆಯ್ಕೆ ಟ್ರಯಲ್ಸ್‌ ವೇಳೆ ಡೋಪಿಂಗ್‌ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಆಯೋಜಕರಿಗೆ ನೋಟಿಸ್ ನೀಡಲಾಗಿದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ತಿಳಿಸಿದರು.

ಸೆ.16ರಂದು ‘ಪ್ರಜಾವಾಣಿ’ಯಲ್ಲಿ ಕುಸ್ತಿ ಆಯ್ಕೆ ಟ್ರಯಲ್ಸ್‌ನಲ್ಲಿ ಡೋಪಿಂಗ್ ಛಾಯೆ ಕುರಿತು ವಿಶೇಷ ವರದಿ ಪ್ರಕಟವಾಗಿತ್ತು. ವಿಧಾನ ಪರಿಷತ್‌ನಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ಡಿ.ಎಸ್. ಅರುಣ್ ಅವರು ‘ಪ್ರಜಾವಾಣಿ’ ವರದಿಯ ಕುರಿತು ಪ್ರಸ್ತಾಪಿಸಿದಾಗ ಸಚಿವ ನಾರಾಯಣಗೌಡ ನೋಟಿಸ್‌ ನೀಡಿದ್ದಾಗಿ ಹೇಳಿದರು.

ರಾಜ್ಯದ ಕ್ರೀಡಾ ಸಂಸ್ಥೆಗಳು ಇನ್ನುಮುಂದೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟ ಆಯೋಜಿಸುವಾಗ ಹಾಗೂ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ವೇಳೆ ಕಡ್ಡಾಯವಾಗಿ ಡೋಪಿಂಗ್ ಪರೀಕ್ಷೆಗೆ ಒಳಪಡಿಸುವಂತೆ ಸುತ್ತೋಲೆ ಹೊರಡಿಸಲಾಗುತ್ತಿದೆ. ಡೋಪಿಂಗ್ ಪರೀಕ್ಷೆಯಲ್ಲಿ  ಸಿಕ್ಕಿಬೀಳುವ ಕ್ರೀಡಾಪಟುಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವ ಜೊತೆಗೆ ಇಲಾಖೆಯಿಂದ ಯಾವುದೇ ಸೌಲಭ್ಯ ನೀಡದಂತೆಯೂ  ಸೂಚಿಸಲಾಗಿದೆ ಎಂದು ಸಚಿವರು ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು