ಶುಕ್ರವಾರ, ಏಪ್ರಿಲ್ 23, 2021
32 °C

ಇಂಗ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌: ಸೋತ ಸಿಂಧು, ಭಾರತದ ಸವಾಲು ಅಂತ್ಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬರ್ಮಿಂಗ್‌ಹ್ಯಾಂ: ಆರನೇ ಶ್ರೇಯಾಂಕದ ಆಟಗಾರ್ತಿ ಪಿ.ವಿ.ಸಿಂಧು, ಆಲ್‌ ಇಂಗ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನ ಮಹಿಳಾ ಸಿಂಗಲ್ಸ್‌ ಕ್ವಾರ್ಟರ್‌ಫೈನಲ್‌ನಲ್ಲಿ ಶುಕ್ರವಾರ ಜಪಾನ್‌ನ ನೊಜೊಮಿ ಒಕುಹಾರ ಎದುರು ಸೋಲನುಭವಿಸಿದರು. ಇದರೊಂದಿಗೆ ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿತು

ಶುಕ್ರವಾರ ನಡೆದ ಪಂದ್ಯದಲ್ಲಿ ಹಿನ್ನಡೆಯಿಂದ ಚೇತರಿಸಿದ ನಾಲ್ಕನೇ ಶ್ರೇಯಾಂಕದ ಒಕುಹಾರ 68 ನಿಮಿಷಗಳ ಸೆಣಸಾಟದಲ್ಲಿ 12–21, 21–15, 21–13 ರಿಂದ ಪುಸರ್ಲ ವಿ.ಸಿಂಧು ಅವರನ್ನು ಸೋಲಿಸಿದರು.

ಭಾರತದ ಮಹಿಳಾ ಡಬಲ್ಸ್‌ ಜೋಡಿ ಅಶ್ವಿನಿ ಪೊನ್ನಪ್ಪ–ಎನ್‌. ಸಿಕ್ಕಿರೆಡ್ಡಿ ಗುರುವಾರ ರಾತ್ರಿ ನಡೆದ ಎರಡನೇ ಸುತ್ತಿನ ಹಣಾಹಣಿಯಲ್ಲಿ ವಿಶ್ವದ 29ನೇ ರ‍್ಯಾಂಕಿನ ಜೋಡಿ 13–21, 14–21ರಿಂದ ಜಪಾನ್‌ನ ಮಿಸಾಕಿ ಮತ್ಸುಟೊಮೊ– ಆಯಾಕ್‌ ತಕಹಶಿ ಎದುರು ಸೋಲನುಭವಿಸಿತು.

‌ಸಚಿವ ರಿಜಿಜುಗೆ ಕರೆ: ಗುರುವಾರ ಕ್ರೀಡಾ ಸಚಿವ ಕಿರಣ್‌ ರಿಜಿಜು ಅವರಿಗೆ ದೂರವಾಣಿ ಕರೆ ಮಾಡಿದ್ದ ಸಿಂಧು, ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಟೂರ್ನಿಯಲ್ಲಿ ಮುಂದುವರಿಯಬೇಕೇ ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿದ ಸಚಿವರು ಅಲ್ಲಿನ ಸುರಕ್ಷತಾ ನಿಯಮ ಪಾಲಿಸಿ ಮುಂದುವರಿಯುವಂತೆ ಸಲಹೆ ನೀಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು