ನವದೆಹಲಿ (ಪಿಟಿಐ): ಭಾರತದ ಫೆನ್ಸಿಂಗ್ ಪಟು ಭವಾನಿ ದೇವಿ ಅವರು ಫ್ರಾನ್ಸ್‌ನಲ್ಲಿ ನಡೆದ ಚಾರ್ಲ್‌ವಿಲ್ಲೆ ರಾಷ್ಟ್ರೀಯ ಸ್ಪರ್ಧೆಯ ಸೇಬರ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಈ ಕುರಿತು 28 ವರ್ಷದ ಭವಾನಿ ಅವರು ಟ್ವೀಟ್ ಮಾಡಿ ವಿಷಯ ತಿಳಿಸಿದ್ದಾರೆ.

‘ಚಾರ್ಲ್‌ವಿಲ್ಲೆ ಸ್ಪರ್ಧೆಯ ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದ್ದೇನೆ. ಕೋಚ್ ಕ್ರಿಸ್ಟಿಯನ್ ಬಾವುರ್, ಅರ್ನಾಡ್ ಶೀಡರ್ ಮತ್ತು ತಂಡದ ಎಲ್ಲರಿಗೂ ಅಭಿನಂದನೆಗಳು‘ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಮೂಲಕ ಈ ಕ್ರೀಡೆಯಲ್ಲಿ ಅರ್ಹತೆ ಗಳಿಸಿದ ಭಾರತದ ಮೊದಲ ಮಹಿಳೆ ಎನಿಸಿಕೊಂಡಿದ್ದರು ಭವಾನಿ. ಒಲಿಂಪಿಕ್ಸ್‌ನ ಮೊದಲ ಸುತ್ತಿನಲ್ಲಿ ಜಯಿಸಿದ್ದ ಅವರು ಎರಡನೇ ಸುತ್ತಿನಲ್ಲಿ ನಿರಾಸೆ ಅನುಭವಿಸಿದ್ದರು.

ಸದ್ಯ ಅವರು ವಿಶ್ವ ರ‍್ಯಾಂಕಿಂಗ್‌ನಲ್ಲಿ 50ನೇ ಸ್ಥಾನದಲ್ಲಿದ್ದಾರೆ. 2022ರ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಸಾಮರ್ಥ್ಯ ತೋರಲು ಸಜ್ಜಾಗುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.