ಶನಿವಾರ, ಜುಲೈ 24, 2021
28 °C

ಟೋಕಿಯೊ ಒಲಿಂಪಿಕ್ಸ್ ಕ್ರೀಡಾ ಗ್ರಾಮದಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೋಕಿಯೊ: ಒಲಿಂಪಿಕ್ಸ್ ಕ್ರೀಡಾಕೂಟ ಆರಂಭಕ್ಕೆ ಆರು ದಿನ ಬಾಕಿ ಉಳಿದಿರುವಂತೆ ಒಲಿಂಪಿಕ್ಸ್ ಕ್ರೀಡಾ ಗ್ರಾಮದಲ್ಲಿ ಮೊದಲ ಕೋವಿಡ್ ಪ್ರಕರಣ ದಾಖಲಾಗಿದೆ ಎಂದು ಸಂಘಟಕರು ಶನಿವಾರ ತಿಳಿಸಿದ್ದಾರೆ.

‘ಕ್ರೀಡಾ ಗ್ರಾಮದಲ್ಲಿ ಒಬ್ಬ ವ್ಯಕ್ತಿಗೆ ಸ್ಕ್ರೀನಿಂಗ್ ಪರೀಕ್ಷೆ ವೇಳೆ ಕೋವಿಡ್ ದೃಢಪಟ್ಟಿದೆ. ಇದು ಕ್ರೀಡಾ ಗ್ರಾಮದಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಿದೆ’ ಎಂದು ಟೋಕಿಯೊ ಸಂಘಟನಾ ಸಮಿತಿಯ ವಕ್ತಾರ ಮಾಸಾ ಟಕಯಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವ್ಯಕ್ತಿಯ ಗುರುತು ಮತ್ತು ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿರುವ ಸಂಘಟಕರು, ವ್ಯಕ್ತಿಯನ್ನು ಸಾವಿರಾರು ಕ್ರೀಡಾಪಟುಗಳು ಮತ್ತು ಅಧಿಕಾರಿಗಳು ಇರುವ ಕ್ರೀಡಾಗ್ರಾಮದಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

‘ಕೋವಿಡ್ ಹರಡುವಿಕೆ ತಡೆಗಟ್ಟಲು ನಾವು ಎಲ್ಲ ರೀತಿಯ ಕ್ರಮ ಕೈಗೊಂಡಿದ್ದೇವೆ. ಕೋವಿಡ್ ನಿರ್ವಹಣೆಗೆ ನಮ್ಮ ಬಳಿ ಯೋಜನೆ ಇದೆ’ ಎಂದು ಕ್ರೀಡಾಕೂಟದ ಮುಖ್ಯ ಸಂಘಟಕರಾದ ಸೀಕೊ ಹಶಿಮೊಟೊ ಹೇಳಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ಈಗಾಗಲೇ ಒಂದು ವರ್ಷ ಒಲಿಂಪಿಕ್ಸ್‌ ಮುಂದೂಡಲ್ಪಟ್ಟಿತ್ತು. ಹೀಗಾಗಿ, ಕ್ರೀಡಾ ಗ್ರಾಮದಲ್ಲಿ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ಸಂಘಟಕರು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ.. Pv Web Exclusive: ಆತಂಕದ ಮಧ್ಯೆ ಕ್ರೀಡಾ ಮೇಳಕ್ಕೆ ದಿನಗಣನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು