ಬುಧವಾರ, ಡಿಸೆಂಬರ್ 1, 2021
20 °C

ಜೂನಿಯರ್ ಹಾಕಿ ವಿಶ್ವಕಪ್: ವಿದೇಶಿ ತಂಡಗಳಿಗೆ ಕ್ವಾರಂಟೈನ್‌ ವಿನಾಯಿತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭುವನೇಶ್ವರದಲ್ಲಿ ಮುಂದಿನ ತಿಂಗಳು ನಿಗದಿಯಾಗಿರುವ ಎಫ್‌ಐಎಚ್‌ ಪುರುಷರ ಜೂನಿಯರ್‌ ವಿಶ್ವಕಪ್‌ ಹಾಕಿ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ವಿದೇಶಿ ತಂಡಗಳಿಗೆ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ. ತಮ್ಮ ಆಟಗಾರರಿಗೆ ಕೋವಿಡ್‌ ರೋಗಲಕ್ಷಣಗಳ ಕುರಿತು ಆಯಾ ತಂಡದವರೇ ಮೇಲ್ವಿಚಾರಣೆ ನಡೆಸಬೇಕಾಗುತ್ತದೆ.

ಈ ಕುರಿತು ಈ ತಿಂಗಳ ಆರಂಭದಲ್ಲಿ ಕ್ರೀಡಾ ಸಚಿವಾಲಯದ ಜಂಟಿ ಕಾರ್ಯದರ್ಶಿ ಎಲ್.ಎಸ್.ಸಿಂಗ್ ಅವರು ಸಲ್ಲಿಸಿದ ಮನವಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸ್ಪಂದಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೆ ವಿದೇಶಗಳಿಂದ ಆಗಮಿಸುವ ಎಲ್ಲ ತಂಡಗಳು ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸಚಿವಾಲಯ ಸೂಚಿಸಿದೆ.

ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಪಂದ್ಯಗಳು ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನವೆಂಬರ್‌ 25ರಿಂದ ಡಿಸೆಂಬರ್‌ 5ರವರೆಗೆ ನಡೆಯಲಿವೆ. ಆತಿಥೇಯ ಭಾರತವು ಟೂರ್ನಿಯ ಹಾಲಿ ಚಾಂಪಿಯನ್ ಆಗಿದೆ.

ಭಾರತದಲ್ಲಿ ತಂಗಿದ್ದ ವೇಳೆಯಲ್ಲಿ ಯಾವುದೇ ಭಾಗೀದಾರರಿಗೆ ಕೊರೊನಾ ಲಕ್ಷಣಗಳು ಕಂಡುಬಂದರೆ, ಅವರನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಕ್ರೀಡಾ ಇಲಾಖೆಯು ಅವರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡಲಿದೆ‘ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ್‌ ಅವರು ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಆತಿಥೇಯ ಭಾರತ ಅಲ್ಲದೆ ಕೊರಿಯಾ, ಮಲೇಷ್ಯಾ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಈಜಿಪ್ಟ್‌, ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ನೆದರ್ಲೆಂಡ್ಸ್, ಸ್ಪೇನ್‌, ಅಮೆರಿಕ, ಕೆನಡಾ, ಚಿಲಿ, ಅರ್ಜೆಂಟೀನಾ ಮತ್ತು ಪೋಲೆಂಡ್‌ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು