ಶನಿವಾರ, ಮಾರ್ಚ್ 28, 2020
19 °C

ಕೃಷಿ ವಿ.ವಿ ಕ್ರೀಡಾಕೂಟ: ಜಿಕೆವಿಕೆ ಮಹಿಳಾ ತಂಡಕ್ಕೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ಆಂಧ್ರಪ್ರದೇಶದ ತಿರುಪತಿಯ ವೆಂಕಟೇಶ್ವರ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲಭಾರತ ಅಂತರಕೃಷಿ ವಿಶ್ವವಿದ್ಯಾಲಯಗಳ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ (ಜಿಕೆವಿಕೆ) ಆಟಗಾರರು, ಹಲವು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಮಹಿಳಾ ವಿಭಾಗದಲ್ಲಿ ಚಾಂಪಿಯನ್‌ಶಿಪ್ ಹಾಗೂ ಸಮಗ್ರ ತಂಡ ಪ್ರಶಸ್ತಿ ಗೆದ್ದುಗೊಂಡಿದ್ದಾರೆ.

ಮಹಿಳಾ ವಿಭಾಗದಲ್ಲಿ ವಾಲಿಬಾಲ್, ಬ್ಯಾಸ್ಕೆಟ್ ಬಾಲ್-ಪ್ರಥಮ, ಕೊಕ್ಕೊ ದ್ವಿತೀಯ ಮತ್ತು 100, 200 ಹಾಗೂ 4X100 ಮೀಟರ್ ರಿಲೇ ಪಂದ್ಯದಲ್ಲಿ ಪ್ರಥಮಸ್ಥಾನ ಗಳಿಸಿದ್ದಾರೆ.

ಪುರುಷರ ವಿಭಾಗದಲ್ಲಿ 800 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು 1,500 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿಜೇತರಾದ ಆಟಗಾರರನ್ನು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್, ಆಡಳಿತ ಮಂಡಳಿ ಸದಸ್ಯರು ಹಾಗೂ ಪ್ರಾಧ್ಯಾಪಕರು ಅಭಿನಂದಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು