ಭಾನುವಾರ, ಜನವರಿ 26, 2020
28 °C

ಹ್ಯಾಂಡ್‌ಬಾಲ್‌ಪಂದ್ಯಾವಳಿಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ನ್ಯೂ ಹೊರೈಜಾನ್ ಕಾಲೇಜು ಸಹಯೋಗದಲ್ಲಿ ದಕ್ಷಿಣ ವಲಯದ ಅಂತರ ವಿಶ್ವವಿದ್ಯಾಲಯಗಳ ಪುರುಷರ ಹ್ಯಾಂಡ್‌ಬಾಲ್‌ ಪಂದ್ಯಾವಳಿಗಳು ಇದೇ 21ರಿಂದ 24ರವರೆಗೆ ಮಾರತ್ತಹಳ್ಳಿಯ ನ್ಯೂ ಹೊರೈಜಾನ್ ಕಾಲೇಜು ಮೈದಾನದಲ್ಲಿ ನಡೆಯಲಿವೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಜನಾರ್ದನ್,‘ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಹಾಗೂ ವೇದಿಕೆ ಕಲ್ಪಿಸುವ ಉದ್ದೇಶದಿಂದ ಪಂದ್ಯಾವಳಿಗಳನ್ನು ಏರ್ಪಡಿಸಿದ್ದೇವೆ. ಸಂಯೋಜಿತ ಕಾಲೇಜುಗಳು ಹಾಗೂ ಗ್ರಾಮೀಣ ಭಾಗದ ಕಾಲೇಜುಗಳ ವಿದ್ಯಾರ್ಥಿಗಳ ಸಮಾಗಮಕ್ಕೆ ಈ ಪಂದ್ಯಾವಳಿ ಸಾಕ್ಷಿಯಾಗಲಿದೆ’ ಎಂದು ತಿಳಿಸಿದರು.

‘ಪಂದ್ಯಾವಳಿಯನ್ನು 21ರಂದು ಬೆಳಿಗ್ಗೆ 10 ಗಂಟೆಗೆ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಸಂಸದ ಪಿ.ಸಿ.ಮೋಹನ್ ಹಾಗೂ ಅಂತರರಾಷ್ಟ್ರೀಯ ಹ್ಯಾಂಡ್‌ಬಾಲ್ ಆಟಗಾರ ಸುರೇಶ್ ಭಾಗವಹಿಸಲಿದ್ದಾರೆ’ ಎಂದರು.

ಪ್ರತಿಕ್ರಿಯಿಸಿ (+)