ಶನಿವಾರ, ಜೂನ್ 6, 2020
27 °C

ಹಾಕಿ ದಿಗ್ಗಜ ಬಲ್ಬೀರ್ ಸಿಂಗ್ ಸೀನಿಯರ್ ಅಸ್ವಸ್ಥ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಒಲಿಂಪಿಯನ್ ಹಾಕಿಪಟು ಬಲ್ಬೀರ್ ಸಿಂಗ್ ಸೀನಿಯರ್ (96) ಅವರು ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಅವರನ್ನು ಶನಿವಾರ ಸೆಕ್ಟರ್ 36ರಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದ. ನ್ಯೂಮೋನಿಯಾದಿಂದ ಬಳಲುತ್ತಿರುವ ಅವರಿಗೆ  ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆಯೆಂದು ವೈದ್ಯರು ತಿಳಿಸಿದ್ದಾರೆ’ ಎಂದು ಮೊಮ್ಮಗ ಕಬೀರ್ ಸಿಂಗ್ ತಿಳಿಸಿದ್ದಾರೆ.

‘ಬಲ್ಬೀರ್ ಅವರಿಗೆ ಗುರುವಾರ ರಾತ್ರಿ ತೀವ್ರ ಜ್ವರ ಇತ್ತು. ಇಲ್ಲಿಯ ಪಿಜಿಐ ಆಸ್ಪತ್ರೆಯು ಕೋವಿಡ್ ಆಸ್ಪತ್ರೆಯಾಗಿದೆ. ಆದ್ದರಿಂದ ಅಲ್ಲಿ ಐಸಿಯು ಸಿಗಲಿಲ್ಲ. ತುಂಬಾ ತೊಂದರೆಯಾಯಿತು. ಆದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಹಿರಿಯ ಹಾಕಿಪಟು ಮತ್ತು ಸಿಂಗ್ ಅವರ ಸ್ನೇಹಿತ ಡಾ. ರಾಜೀಂದರ್ ಕಾಲ್ರಾ ತಿಳಿಸಿದ್ದಾರೆ.

ಭಾರತ ತಂಡವು ಮೂರು ಸಲ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಾಗ ಅವರು ಆಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು