ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಭಾರತಕ್ಕೆ ಆಸ್ಟ್ರೇಲಿಯಾ ಸವಾಲು

Last Updated 25 ನವೆಂಬರ್ 2022, 19:29 IST
ಅಕ್ಷರ ಗಾತ್ರ

ಅಡಿಲೇಡ್‌ (ಪಿಟಿಐ): ವಿಶ್ವಕಪ್ ಟೂರ್ನಿಗೂ ಮೊದಲು ತನ್ನ ಬಲ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳಲು ಭಾರತ ಪುರುಷರ ಹಾಕಿ ತಂಡಕ್ಕೆ ಮತ್ತೊಂದು ಅವ ಕಾಶ ಸಿಕ್ಕಿದೆ. ಶನಿವಾರ ಇಲ್ಲಿ ಆರಂಭವಾಗುವ ಐದು ಪಂದ್ಯಗಳ ಸರಣಿಯ ಮೊದಲ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

ವಿಶ್ವ ಹಾಕಿಯಲ್ಲಿ ಬಲಿಷ್ಠ ತಂಡಗಳಲ್ಲಿ ಒಂದಾದ ಆಸ್ಟ್ರೇಲಿಯಾ ಎದುರು ಭಾರತ ಕೊನೆಯ ಬಾರಿ ಆಡಿದ್ದು ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ. ಆ ಪಂದ್ಯದಲ್ಲಿ ಭಾರತ 0–7ರಿಂದ ಆಸ್ಟ್ರೇಲಿಯಾಕ್ಕೆ ಮಣಿದಿತ್ತು. ಭಾರತ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ಮುನ್ನಡೆಸಲಿದ್ದಾರೆ.

ಪಂದ್ಯ ಆರಂಭ: ಬೆಳಿಗ್ಗೆ 11

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT