ಬುಧವಾರ, ಮಾರ್ಚ್ 29, 2023
25 °C

Hockey World Cup 2023: ಭಾರತ - ಇಂಗ್ಲೆಂಡ್ ಪಂದ್ಯ ಡ್ರಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ರೂರ್ಕೆಲಾ: ಒಡಿಶಾದಲ್ಲಿ ನಡೆಯುತ್ತಿರುವ ಪುರುಷರ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಭಾನುವಾರ ನಡೆದ ಪಂದ್ಯವು ಗೋಲುರಹಿತ ಡ್ರಾದಲ್ಲಿ ಅಂತ್ಯಗೊಂಡಿದೆ.

'ಡಿ' ಗುಂಪಿನ ಎರಡನೇ ಪಂದ್ಯದಲ್ಲಿ ಭಾರತಕ್ಕೆ ಬಲಿಷ್ಠ ಇಂಗ್ಲೆಂಡ್ ತಂಡದ ಸವಾಲು ಎದುರಾಗಿತ್ತು. ಆದರೆ ಚುರುಕಿನ ಪ್ರದರ್ಶನ ನೀಡಿದ ಹರ್ಮನ್‌ಪ್ರೀತ್ ಸಿಂಗ್ ಬಳಗವು ಎದುರಾಳಿ ತಂಡಕ್ಕೆ ನಿಕಟ ಪೈಪೋಟಿ ಒಡ್ಡುವಲ್ಲಿ ಯಶಸ್ವಿಯಾಯಿತು.

ಇದನ್ನೂ ಓದಿ: 

ಪಂದ್ಯದ ನಾಲ್ಕು ಕ್ವಾರ್ಟರ್‌ನಲ್ಲೂ ಎರಡೂ ತಂಡಗಳು ಸಮಬಲದ ಹೋರಾಟ ನೀಡಿದವು. ಆದರೆ ಉಭಯ ತಂಡಗಳಿಗೂ ಲಭಿಸಿದ ಅವಕಾಶವನ್ನು ಗೋಲಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ.

 

 

 

ಎರಡನೇ ಸ್ಥಾನದಲ್ಲಿ ಭಾರತ...
ಇಂಗ್ಲೆಂಡ್ ವಿರುದ್ಧದ ಡ್ರಾ ಫಲಿತಾಂಶದೊಂದಿಗೆ ಸದ್ಯ ನಾಲ್ಕು ಅಂಕ ಹೊಂದಿರುವ ಭಾರತ ಎರಡನೇ ಸ್ಥಾನದಲ್ಲಿದೆ. ಅಷ್ಟೇ ಅಂಕಗಳನ್ನು ಹೊಂದಿರುವ ಇಂಗ್ಲೆಂಡ್, ಗೋಲುಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದು, ಅಗ್ರಸ್ಥಾನ ಕಾಯ್ದುಕೊಂಡಿದೆ.

 

ಮೊದಲ ಪಂದ್ಯದಲ್ಲಿ ಸ್ಪೇನ್ ವಿರುದ್ಧ ಭಾರತ 2-0 ಗೋಲುಗಳ ಅಂತರದ ಗೆಲುವು ಸಾಧಿಸಿತ್ತು. ಜನವರಿ 19ರಂದು ಗುಂಪು ಹಂತದ ಕೊನೆಯ ಹಂತದಲ್ಲಿ ಭಾರತ ತಂಡವು ವೇಲ್ಸ್ ಸವಾಲನ್ನು ಎದುರಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು