ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕಪ್ ಶೂಟಿಂಗ್‌ ಭಾರತ ಆತಿಥ್ಯ

Last Updated 15 ಜುಲೈ 2019, 18:12 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಷ್ಟ್ರೀಯ ಶೂಟಿಂಗ್ ಕ್ರೀಡಾ ಫೆಡರೇಷನ್ (ಐಎಸ್‌ಎಸ್‌ಎಫ್) ಆಯೋಜಿಸುವ ಶೂಟಿಂಗ್ ವಿಶ್ವಕಪ್‌ನ ಮುಂದಿನ ಆವೃತ್ತಿಗೆ ಭಾರತ ಆತಿಥ್ಯ ವಹಿಸಲಿದೆ.

ಮಾರ್ಚ್‌ 15ರಿಂದ 26ರ ವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಸ್ಪರ್ಧೆಗಳು ನಡೆಯಲಿವೆ. ಸೋಮವಾರ ನಡೆದ ಫೆಡರೇಷನ್‌ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ರೈಫಲ್, ಪಿಸ್ತೂಲ್ ಮತ್ತು ಶಾಟ್‌ಗನ್‌ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.

ಟೋಕಿಯೊ ಒಲಿಂಪಿಕ್ಸ್‌ಗೆ ಆಯ್ಕೆಯಾದ ಶೂಟರ್‌ಗಳಿಗೆ ಅಭ್ಯಾಸ ಮಾಡಲು ವಿಶ್ವಕಪ್‌ ಉತ್ತಮ ಅವಕಾಶ ಒದಗಿಸಲಿದೆ. ಕಳೆದ ವರ್ಷ ವಿಶ್ವಕಪ್ ಫೈನಲ್ಸ್‌ಗೆ ಭಾರತ ಆತಿಥ್ಯ ವಹಿಸಿತ್ತು. ಈ ವರ್ಷದ ಫೆಬ್ರುವರಿಯಲ್ಲಿ ವಿಶ್ವಕಪ್‌ ಸ್ಪರ್ಧೆಗಳು ಇಲ್ಲೇ ನಡೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT