ಭಾನುವಾರ, ಮೇ 29, 2022
21 °C

ಇಂಡಿಯಾ ಓಪನ್ ಬ್ಯಾಡ್ಮಿಂಟನ್‌ ಟೂರ್ನಿ: ಸಿಂಧು, ಶ್ರೀಕಾಂತ್‌ಗೆ ಅಗ್ರಶ್ರೇಯಾಂಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದ ಪಿ.ವಿ.ಸಿಂಧು ಹಾಗೂ ಕಿದಂಬಿ ಶ್ರೀಕಾಂತ್‌ ಅವರು ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ರಮವಾಗಿ ಮಹಿಳಾ ಮತ್ತು ಪುರುಷರ ಸಿಂಗಲ್ಸ್ ವಿಭಾಗಗಳಲ್ಲಿ ಅಗ್ರಶ್ರೇಯಾಂಕ ಪಡೆದಿದ್ದಾರೆ.

ಮುಂದಿನ ವರ್ಷ ಜನವರಿ 11ರಿಂದ 16ರವರೆಗೆ ದೇಶದ ರಾಜಧಾನಿಯಲ್ಲಿ ಈ ಟೂರ್ನಿ ನಿಗದಿಯಾಗಿದೆ. ಲಕ್ಷ್ಯ ಸೇನ್‌ ಮತ್ತು ವಿಶ್ವ ಚಾಂಪಿಯನ್ ಆಟಗಾರ ಸಿಂಗಪುರದ ಲೋಹ್ ಕೀನ್ ಯಿವ್‌ ಕೂಡ ಟೂರ್ನಿಯ ಪ್ರಮುಖ ಆಕರ್ಷಣೆಯಾಗಲಿದ್ದಾರೆ.

ಬಿಡಬ್ಲ್ಯುಎಫ್‌ ವಿಶ್ವ ಟೂರ್‌ ಸೂಪರ್ 500ನ ಭಾಗವಾಗಿ ನಡೆಯಲಿರುವ ಟೂರ್ನಿಗೆ ಕೋವಿಡ್‌ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ನಿರ್ಬಂಧ ವಿಧಿಸಲಾಗಿದೆ.

ಪುರುಷರ ಸಿಂಗಲ್ಸ್‌ನಲ್ಲಿ ಬಿ.ಸಾಯಿ ಪ್ರಣೀತ್‌ ಅವರಿಗೆ ಎರಡನೇ ಶ್ರೇಯಾಂಕ ನೀಡಲಾಗಿದೆ. ಎಚ್‌.ಎಸ್‌. ಪ್ರಣಯ್‌, ಪರುಪಳ್ಳಿ ಕಶ್ಯಪ್‌, ಸಮೀರ್ ವರ್ಮಾ ಮತ್ತು ಇಂಡೊನೇಷ್ಯಾದ ಟಾಮಿ ಸುಗಿಯರ್ತೊ ಕೂಡ ಕಣಕ್ಕಿಳಿಯಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು