ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಟ್ಟಮೊದಲ ವಿಶ್ವ ಯೋಗಾಸನ ಚಾಂಪಿಯನ್‌ಷಿಪ್‌ಗೆ ಭಾರತ ಆತಿಥ್ಯ

Last Updated 11 ನವೆಂಬರ್ 2021, 12:46 IST
ಅಕ್ಷರ ಗಾತ್ರ

ನವದೆಹಲಿ: ಮೊಟ್ಟಮೊದಲ ವಿಶ್ವ ಯೋಗಾಸನ ಚಾಂಪಿಯನ್‌ಷಿಪ್ ಮುಂದಿನ ವರ್ಷದ ಜೂನ್‌ನಲ್ಲಿ ಭಾರತದಲ್ಲಿ ನಡೆಯಲಿದೆ.

ರಾಷ್ಟ್ರೀಯ ಯೋಗಾಸನ ಸ್ಪೋರ್ಟ್ಸ್ ಫೆಡರೇಷನ್ ಈ ನಿಟ್ಟಿನಲ್ಲಿಚಟುವಟಿಕೆಗಳನ್ನು ಆರಂಭಿಸಿದೆ. ಕೇಂದ್ರ ಕ್ರೀಡಾ ಸಚಿವಾಲಯವು ಫೆಡರೇಷನ್‌ಗೆ ಮಾನ್ಯತೆ ನೀಡಿದೆ.

ಶುಕ್ರವಾರ ಭುವನೇಶ್ವರದಲ್ಲಿ ಆಯೋಜಿಸಲಾಗಿರುವ ಮೊದಲ ರಾಷ್ಟ್ರೀಯ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್‌ಷಿಪ್ ಉದ್ಘಾಟಿಸಿದ ಎನ್‌ವೈಎಸ್‌ಎಫ್ ಅಧ್ಯಕ್ಷ ಉದಿತ್ ಶೇಠ್ ಈ ವಿಷಯ ತಿಳಿಸಿದರು.

2021ರ ಖೇಲೊ ಇಂಡಿಯಾ ಯೂತ್ ಗೇಮ್ಸ್‌ನಲ್ಲಿ ಯೋಗ ಸ್ಪರ್ಧೆಯನ್ನು ಸೇರ್ಪಡೆ ಮಾಡಲಾಗಿದೆ.

‘ರಾಷ್ಟ್ರೀಯ ಚಾಂಪಿಯನ್‌ಷಿಪ್‌ಗೆ ಬೇರೆ ಬೇರೆ ರಾಜ್ಯಗಳಿಂದ ಬಹಳಷ್ಟು ಸಂಖ್ಯೆಯಲ್ಲಿ ಸ್ಪರ್ಧಿಗಳು ಬಂದಿದ್ದಾರೆ. ಪ್ರತಿಭಾವಂತ ಯೋಗಪಟುಗಳು, ತರಬೇತುದಾರರು ಮತ್ತು ಪರಿಣತರು ಇದ್ದಾರೆ. ಯೋಗವು ಕ್ರೀಡೆಯಾಗಿ ವಿಶ್ವಮಟ್ಟದಲ್ಲಿ ಜನಪ್ರಿಯತೆ ಗಳಿಸುವುದು ಖಚಿತ’ ಎಂದು ಶೇಠ್ ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT