ಸೋಮವಾರ, ಡಿಸೆಂಬರ್ 5, 2022
21 °C

ಭಾರತದಲ್ಲಿ 2023ರ ವಿಶ್ವ ಮಹಿಳಾ ಬಾಕ್ಸಿಂಗ್‌: ಬಿಎಫ್‌ಐ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತ 2023ರಲ್ಲಿ ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಷಿಪ್ ಆಯೋಜಿಸಲಿದೆ. ಎರಡು ವರ್ಷಗಳ ಹಿಂದೆ ಅಂತರರಾಷ್ಟ್ರೀಯ ಬಾಕ್ಸಿಂಗ್‌ ಸಂಸ್ಥೆಗೆ ಅಗತ್ಯ ಶುಲ್ಕ ಭರಿಸಲು ವಿಫಲವಾದ ಕಾರಣ ಪುರುಷರ ವಿಶ್ವ ಚಾಂಪಿಯನ್‌ಷಿಪ್ ಆತಿಥ್ಯವನ್ನು ದೇಶ ಕಳೆದುಕೊಂಡಿತ್ತು.

ಪುರುಷರ ವಿಶ್ವ ಕೂಟವನ್ನು ಭಾರತ ಎಂದಿಗೂ ಆಯೋಜಿಸಿಲ್ಲ. 2006, 2018ರಲ್ಲಿ ಮಹಿಳಾ ಚಾಂಪಿಯನ್‌ಷಿಪ್ ನಡೆದಿತ್ತು. ಈಗ ನಡೆಯಲಿರುವುದು ಮೂರನೇ ಬಾರಿ.

‘ಮಹಿಳಾ ಬಾಕ್ಸಿಂಗ್ ಆತಿಥ್ಯದ ಹಕ್ಕು ಲಭಿಸಿದೆ. ದೆಹಲಿಯಲ್ಲಿ ಮಾರ್ಚ್‌ ತಿಂಗಳ ಅಂತ್ಯದಲ್ಲಿ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಟೂರ್ನಿ ಆಯೋಜಿಸಲು ಎದುರು ನೋಡುತ್ತಿದ್ದೇವೆ‘ ಎಂದು ಭಾರತ ಬಾಕ್ಸಿಂಗ್ ಫೆಡರೇಷನ್‌ (ಬಿಎಫ್‌ಐ) ಪ್ರಧಾನ ಕಾರ್ಯದರ್ಶಿ ಹೇಮಂತ್‌ ಕಲಿಟ ತಿಳಿಸಿದ್ದಾರೆ.

‘ಅಂತರರಾಷ್ಟ್ರೀಯ ಬಾಕ್ಸಿಂಗ್‌ ಸಂಸ್ಥೆ (ಐಬಿಎ) ಅಧ್ಯಕ್ಷ ಉಮರ್ ಕ್ರೆಮ್ಲೆವ್‌ ಮೊದಲ ಬಾರಿ ಭಾರತ ಪ್ರವಾಸ ಕೈಗೊಳ್ಳುತ್ತಿದ್ದು, ಅವರು ಬಂದ ಬಳಿಕ ಚಾಂಪಿಯನ್‌ಷಿಪ್ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುವುದು‘ ಎಂದು ಕಲಿಟ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು