ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ ಆಟಗಾರ್ತಿ ನಮಿತಾ ಟೊಪ್ಪೊ ವಿದಾಯ

Last Updated 15 ಸೆಪ್ಟೆಂಬರ್ 2022, 13:10 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಮಹಿಳಾ ಹಾಕಿ ತಂಡದ ಮಿಡ್‌ಫೀಲ್ಡರ್‌ ನಮಿತಾ ಟೊಪ್ಪೊ ಅವರು ಗುರುವಾರ ನಿವೃತ್ತಿ ಪ್ರಕಟಿಸಿದರು.

2012 ರಲ್ಲಿ ಮೊದಲ ಬಾರಿ ಭಾರತ ಸೀನಿಯರ್‌ ತಂಡದಲ್ಲಿ ಸ್ಥಾನ ಪಡೆದಿದ್ದ ಅವರು 168 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

27 ವರ್ಷದ ನಮಿತಾ, 2014 ಮತ್ತು 2018 ರಲ್ಲಿ ಏಷ್ಯನ್‌ ಕ್ರೀಡಾಕೂಟದಲ್ಲಿ ಕಂಚು ಹಾಗೂ ಬೆಳ್ಳಿ ಜಯಿಸಿದ್ದ ಭಾರತ ತಂಡದಲ್ಲಿ ಆಡಿದ್ದರು.

‘ಕಳೆದ 10 ವರ್ಷಗಳು ಖಂಡಿತವಾಗಿಯೂ ನನ್ನ ಜೀವನದ ಅತ್ಯುತ್ತಮ ವರ್ಷಗಳಾಗಿವೆ. ಪ್ರಮುಖ ಟೂರ್ನಿಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಬೇಕೆಂಬುದು ಕನಸಾಗಿತ್ತು. ಅದನ್ನು ಈಡೇರಿಸಲು ಸಾಧ್ಯವಾಗಿರುವುದು ಸಂತಸದ ವಿಷಯ’ ಎಂದು ಹಾಕಿ ಇಂಡಿಯಾ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ನಮಿತಾ ಹೇಳಿದ್ದಾರೆ.

ಒಡಿಶಾದ ಸುಂದರಗಡ ಜಿಲ್ಲೆಯ ನಮಿತಾ ಅವರು ರೂರ್ಕೆಲಾದ ಸ್ಟೋರ್ಟ್ಸ್‌ ಹಾಸ್ಟೆಲ್‌ನಲ್ಲಿದ್ದುಕೊಂಡು ಹಾಕಿ ತರಬೇತಿ ಪಡೆದಿದ್ದರು. 2007 ರಲ್ಲಿ ಮೊದಲ ಬಾರಿ ಒಡಿಶಾ ತಂಡದಲ್ಲಿ ಆಡಿದ್ದ ಅವರು 2011 ರಲ್ಲಿ ಭಾರತ 18 ವರ್ಷದೊಳಗಿನ ತಂಡಕ್ಕೆ ಆಯ್ಕೆಯಾಗಿದ್ದರು.

2012 ರಲ್ಲಿ ಡಬ್ಲಿನ್‌ನಲ್ಲಿ ನಡೆದ ಎಫ್‌ಐಎಚ್‌ ಚಾಂಪಿಯನ್ಸ್‌ ಚಾಲೆಂಜ್‌ ಟೂರ್ನಿಯಲ್ಲಿ ಮೊದಲ ಬಾರಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರು.

2013ರ ಎಫ್‌ಐಎಚ್‌ ಮಹಿಳಾ ಜೂನಿಯರ್ ವಿಶ್ವಕಪ್‌, ಎಫ್‌ಐಎಚ್‌ ಮಹಿಳಾ ವಿಶ್ವಲೀಗ್‌–2, ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ, 2014ರ ಕಾಮನ್‌ವೆಲ್ತ್‌ ಕ್ರೀಡಾಕೂಟ ಮತ್ತು 2016ರ ರಿಯೊ ಒಲಿಂಪಿಕ್‌ ಕೂಟ ಸೇರಿದಂತೆ ಹಲವು ಪ್ರಮುಖ ಟೂರ್ನಿಗಳಲ್ಲಿ ರಾಷ್ಟ್ರೀಯ ತಂಡದ ಪರ ಆಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT