ಬುಧವಾರ, ಮೇ 18, 2022
23 °C

ಪ್ರೊ ಬಾಕ್ಸಿಂಗ್‌ಗೆ ಭಾರತದ ಸರ್ಜುಬಾಲಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದ ಮಹಿಳಾ ಬಾಕ್ಸರ್‌, ಒಲಿಂಪಿಯನ್‌ ಸರ್ಜುಬಾಲಾ ದೇವಿ ಅವರು ಪ್ರೊ ಬಾಕ್ಸಿಂಗ್ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ಅನುಭವಿ ಕೋಚ್‌ ಮುಜ್ತಬಾ ಕಮಲ್‌ ಮತ್ತು ಇಂಫಾಲ್‌ನ ಗ್ರಾಸ್‌ರೂಟ್‌ ಬಾಕ್ಸಿಂಗ್ ಪ್ರೊಮೊಷನ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಮಣಿಪುರದ 28 ವರ್ಷದ ಸರ್ಜುಬಾಲಾ, 2014ರಲ್ಲಿ ಕೊರಿಯಾದಲ್ಲಿ ನಡೆದ ಎಐಬಿಎ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಈ ಹಿಂದೆ ವಿಶ್ವ ಯೂತ್ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕವನ್ನು ಜಯಿಸಿದ್ದರು.

2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಅವರು ಭಾರತವನ್ನು ಪ್ರತಿನಿಧಿಸಿದ್ದರು.

ಫೆಬ್ರುವರಿ 26ರಂದು ದುಬೈನಲ್ಲಿ ನಡೆಯುವ ಬೌಟ್‌ ಮೂಲಕ ವೃತ್ತಿಪರ ಬಾಕ್ಸಿಂಗ್‌ಗೆ ಪದಾರ್ಪಣೆ ಮಾಡಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.