ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌: ಹೈಕೋರ್ಟ್‌ ಮೊರೆಹೋದ ಬಾಕ್ಸರ್‌ಗಳು

Last Updated 6 ಮಾರ್ಚ್ 2023, 19:45 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತ ತಂಡದಲ್ಲಿ ತಮಗೆ ಸ್ಥಾನ ನೀಡದಿರುವುದನ್ನು ಪ್ರಶ್ನಿಸಿ ಮೂವರು ಮಹಿಳಾ ಬಾಕ್ಸರ್‌ಗಳು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಮಂಜು ರಾಣಿ (48 ಕೆ.ಜಿ. ವಿಭಾಗ), ಶಿಕ್ಷಾ ನರ್ವಾಲ್‌ (54 ಕೆ.ಜಿ.) ಮತ್ತು ಪೂನಂ ಪೂನಿಯಾ (60 ಕೆ.ಜಿ.) ಅವರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ಸ್ವೀಕರಿಸಿರುವ ದೆಹಲಿ ಹೈಕೋರ್ಟ್‌, ಮಂಗಳವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

‘2022ರ ಡಿಸೆಂಬರ್‌ನಲ್ಲಿ ಭೋಪಾಲ್‌ನಲ್ಲಿ ನಡೆದಿದ್ದ ರಾಷ್ಟ್ರೀಯ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಜಯಿಸಿದ್ದ ಇತರ ಎಲ್ಲ ಬಾಕ್ಸರ್‌ಗಳಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆದರೆ ನಮ್ಮನ್ನು ಹೊರಗಿಡಲಾಗಿದೆ’ ಎಂದು ಅರ್ಜಿಯಲ್ಲಿ ದೂರಿದ್ದಾರೆ.

‘ನಮಗೆ ಅನ್ಯಾಯವಾಗಿರುವ ಬಗ್ಗೆ ಭಾರತ ಬಾಕ್ಸಿಂಗ್‌ ಫೆಡ ರೇಷನ್‌ಗೆ ದೂರು ನೀಡಿದ್ದೆವು. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಮಂಜು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT