ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರ ಧ್ವಜ ಹಿಡಿದು ತಂಡ ಮುನ್ನಡೆಸುವುದು ದೊಡ್ಡ ಗೌರವ: ಪಿ.ವಿ. ಸಿಂಧು

Last Updated 27 ಜುಲೈ 2022, 16:26 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಂ: ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸುವುದು ಅತಿ ದೊಡ್ಡ ಗೌರವ ಎಂದು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹೇಳಿದ್ದಾರೆ.

‘ಅತಿ ದೊಡ್ಡ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ದೇಶದ ತಂಡವನ್ನು ಮುನ್ನಡೆಸುವ ಗೌರವ ಮತ್ತು ಮಹತ್ತರ ಜವಾಬ್ದಾರಿಯನ್ನು ನನಗೆ ವಹಿಸಿದ್ದಾರೆ. ಇದರಿಂದ ಅತೀವ ಸಂತಸವಾಗಿದೆ. ನನ್ನ ಸಹ ಕ್ರೀಡಾಪಟುಗಳೆಲ್ಲರಿಗೂ ಶುಭಾಶಯಗಳು. ಧ್ವಜಧಾರಿಯಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಭಾರತೀಯ ಒಲಿಂಪಿಕ್ ಸಂಸ್ಥೆಗೆ (ಐಒಎ) ಧನ್ಯವಾದಗಳು’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಗುರುವಾರ (ಜುಲೈ 27) ಚಾಲನೆ ದೊರೆಯಲಿದೆ. ಭಾರತದ ಒಟ್ಟು 215 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಈ ಪೈಕಿ 164 ಅಥ್ಲೀಟ್‌ಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಐಒಎ ತಿಳಿಸಿದೆ.

2018ರಲ್ಲಿ ಗೋಲ್ಡ್‌ ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿಯೂ ಸಿಂಧು ಅವರು ತ್ರಿವರ್ಣ ಧ್ವಜ ಹಿಡಿದು ಭಾರತ ಕ್ರೀಡಾಪಟುಗಳ ತಂಡವನ್ನು ಮುನ್ನಡೆಸಿದ್ದರು. ಇವರು ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯೂ ಹೌದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT