ಬುಧವಾರ, ಜೂನ್ 16, 2021
28 °C

ಮಾಜಿ ಅಂತರರಾಷ್ಟ್ರೀಯ ಸೈಕ್ಲಿಸ್ಟ್ ಚಂದ್ರು ಕುರಣಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕುಂಬಾರಹಳ್ಳ ಗ್ರಾಮದ ನಿವಾಸಿ ಮಾಜಿ ಅಂತರರಾಷ್ಟ್ರೀಯ ಸೈಕ್ಲಿಸ್ಟ್ ಚಂದ್ರು ಮಲ್ಲಪ್ಪ ಕುರಣಿ ಶುಕ್ರವಾರ ತಡರಾತ್ರಿ ನಿಧನರಾದರು.

ಅವರ ಅಂತ್ಯ ಸಂಸ್ಕಾರ ಶನಿವಾರ  ಕುಂಬಾರಹಳ್ಳ ಗ್ರಾಮದ ತೋಟದ ಮನೆಯಲ್ಲಿ ಜರುಗುವುದು. 

ಈ ಹಿಂದೆ ಅಂತರರಾಷ್ಟ್ರೀಯ ಮಟ್ಟದ ಹಲವು ಸೈಕ್ಲಿಂಗ್ ಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿರುವ ಚಂದ್ರು, ಸೈಕ್ಲಿಂಗ್ ತರಬೇತುದಾರರಾಗಿ, ಸಂಘಟಕರಾಗಿ ಹೆಸರು ಮಾಡಿದ್ದರು.

ಚಂದ್ರು ಅವರ ಕೈಯಲ್ಲಿ ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ನೂರಾರು ಮಂದಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸೈಕ್ಲಿಸ್ಟಗಳು ರೂಪುಗೊಂಡಿದ್ದು, ಪೊಲೀಸ್ ಹಾಗೂ ರೈಲ್ವೆ ಇಲಾಖೆಗಳಲ್ಲಿ ಉದ್ಯೋಗ ಪಡೆದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು