ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳ ತನಿಖೆಗಾಗಿ ರಚಿಸಿರುವ ಸಮಿತಿಯು ತನ್ನ ವರದಿಯನ್ನು ಶೀಘ್ರ ಸಲ್ಲಿಸಲಿದೆ ಎಂದು ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಅಧ್ಯಕ್ಷೆ ಪಿ.ಟಿ. ಉಷಾ ತಿಳಿಸಿದ್ದಾರೆ.
‘ಇದು ಸೂಕ್ಷ್ಮ ವಿಷಯ ಆಗಿರುವುದರಿಂದ ಸಮಯ ಬೇಕಾಗುತ್ತದೆ‘ ಎಂದು ಅವರು ಹೇಳಿದ್ದಾರೆ.
ದೇಶದ ಪ್ರಮುಖ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆ ಕುರಿತು ತನಿಖೆ ಮಾಡಲು ಅನುಭವಿ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.
‘ವರದಿ ಅಂತಿಮಗೊಂಡಿಲ್ಲ. ನಾವು ಕುಸ್ತಿಪಟುಗಳೊಂದಿಗೆ ಚರ್ಚಿಸಿದ್ದೇವೆ. ಸಮಿತಿಯು ವರದಿಯನ್ನು ಅಂತಿಮಗೊಳಿಸಿದ ಬಳಿಕ ನಮಗೆ ನೀಡಲಿದೆ‘ ಎಂದು ಉಷಾ ಅವರು ಶನಿವಾರ ಐಒಎಯ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ವಿನೇಶಾ ಫೋಗಟ್, ದೀಪಕ್ ಪೂನಿಯಾ, ರವಿ ದಹಿಯಾ ಮತ್ತಿತರ ಕುಸ್ತಿಪಟುಗಳು ಪ್ರತಿಭಟನೆ ನಡೆಸಿ, ಬ್ರಿಜ್‌ಭೂಷಣ್ ವಿರುದ್ಧದ ಆರೋಪಗಳ ತನಿಖೆಗೆ ಒತ್ತಾಯಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.