ಶುಕ್ರವಾರ, ಏಪ್ರಿಲ್ 23, 2021
27 °C
2022ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಶೂಟಿಂಗ್ ಸೇರಿಸದೇ ಇರುವುದಕ್ಕೆ ವಿರೋಧ

ಸಿಜಿಎಫ್‌ ವಿರುದ್ಧ ಭಾರತ ಪ್ರತಿಭಟನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬರ್ಮಿಂಗ್‌ಹ್ಯಾಮ್‌ನಲ್ಲಿ 2022ರಲ್ಲಿ ನಡೆಯಲಿರುವ ಕಾಮನ್ವೆಲ್ತ್‌ ಕ್ರೀಡಾಕೂಟದಲ್ಲಿ ಶೂಟಿಂಗ್ ಸೇರಿಸದೇ ಇರುವುದನ್ನು ಪ್ರತಿಭಟಿಸಲು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ನಿರ್ಧರಿಸಿದೆ. ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕೂಟದ ಫೆಡರೇಷನ್‌ನ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಐಒಎ ತಿಳಿಸಿದೆ.

ಈ ಕುರಿತು ಫೆಡರೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡೇವಿಡ್ ಗ್ರೀವಂಬರ್ಗ್‌ ಅವರಿಗೆ ಪತ್ರ ಬರೆದಿರುವ ಐಒಎ, ಪ್ರಾದೇಶಿಕ ಮಟ್ಟದ ಚುನಾವಣೆಯಿಂದ ರಾಜೀವ್‌ ಮೆಹ್ತಾ ಅವರ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದೆ. ಮೆಹ್ತಾ ಅವರು ಐಒಎ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕ್ರೀಡಾ ಸಮಿತಿ ಸದಸ್ಯ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರವನ್ನೂ ವಾಪಸ್ ಪಡೆದುಕೊಂಡಿದೆ. ನಾಮದೇವ ಶಿರ್ಗಾಂವ್ಕರ್ ಈ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು