ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲಿಂಪಿಕ್: ಕ್ರೀಡಾಪಟುಗಳ ಮಾಹಿತಿ ಕೇಳಿದ ಐಒಸಿ

Last Updated 23 ಮಾರ್ಚ್ 2020, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳ ಆರೋಗ್ಯ ಸ್ಥಿತಿಯ ಮಾಹಿತಿಯನ್ನು ಈ ವಾರದೊಳಗೆ ನೀಡುವಂತೆ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಸೂಚಿಸಿದೆ ಎಂದು ಭಾರತ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ನರಿಂದರ್ ಬಾತ್ರಾ ತಿಳಿಸಿದರು.

’ಒಲಿಂಪಿಕ್ಸ್ ಮುಂದೂಡಲು ಹೆಚ್ಚುತ್ತಿರುವ ಒತ್ತಡದ ಹಿನ್ನೆಲೆಯಲ್ಲಿ ಎಲ್ಲ ದೇಶಗಳ ಒಲಿಂಪಿಕ್ ಸಮಿತಿಗಳು ಮಾಹಿತಿ ನೀಡುವಂತೆ ಐಒಸಿ ಸೂಚಿಸಿದೆ’ ಎಂದು ಬಾತ್ರಾ ವಿವರಿಸಿದರು.

‘ಕೇಂದ್ರ ಕ್ರೀಡಾ ಸಚಿವರು, ಭಾರತ ಕ್ರೀಡಾ ಪ್ರಾಧಿಕಾರ, ಐಒಸಿ ಮತ್ತು ವಿವಿಧ ರಾಷ್ಟ್ರಗಳ ಒಲಿಂಪಿಕ್ ಸಮಿತಿಗಳ ಮುಖ್ಯಸ್ಥರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಒಲಿಂಪಿಕ್ಸ್ ಸಿದ್ಧತೆಗಳ ಮೇಲೆಯೂ ನಿಗಾ ವಹಿಸಿದ್ದೇನೆ. ಐಒಸಿ ಅಧ್ಯಕ್ಷ ಥಾಮಸ್ ಬಾಕ್ ಮಾರ್ಚ್ 17ರಂದು ವಿವಿಧ ರಾಷ್ಟ್ರಗಳ ಒಲಿಂಪಿಕ್ ಸಂಸ್ಥೆಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಕೋವಿಡ್‌ ಪರಿಣಾಮದ ಬಗ್ಗೆ ಚರ್ಚೆ ನಡೆದಿದೆ’ ಎಂದು ಅವರು ಹೇಳಿದರು.

‘ಪಾಕಿಸ್ತಾನ ಸೂಪರ್‌ ಲೀಗ್‌ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯ ಐದನೇ ಆವೃತ್ತಿಯ ಉಳಿದ ಪಂದ್ಯಗಳನ್ನು ಈ ವರ್ಷದ ನವೆಂಬರ್‌ನಲ್ಲಿ ನಡೆಸುವ ಆಲೋಚನೆ ಇದೆ’ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ (ಪಿಸಿಬಿ) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ವಾಸೀಂ ಖಾನ್‌ ಸೋಮವಾರ ತಿಳಿಸಿದ್ದಾರೆ.

ಪಿಎಸ್‌ಎಲ್‌ನಲ್ಲಿ ಭಾಗಿಯಾಗಿದ್ದ ಕೆಲ ವಿದೇಶಿ ಆಟಗಾರರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಗೋಚರಿಸಿದ್ದವು. ಹೀಗಾಗಿ ಪಿಸಿಬಿ, ಹೋದ ಮಂಗಳವಾರ ಲೀಗ್‌ ಮುಂದೂಡುವ ನಿರ್ಧಾರ ಕೈಗೊಂಡಿತ್ತು.

‘ಈ ಬಾರಿಯ ಲೀಗ್‌ನ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮುಲ್ತಾನ್‌ ಸುಲ್ತಾನ್ಸ್‌ ತಂಡವನ್ನು ಚಾಂಪಿಯನ್‌ ಎಂದು ಘೋಷಿಸುವಂತೆ ಕೆಲವರು ಸಲಹೆ ನೀಡಿದ್ದಾರೆ. ಆರನೇ ಆವೃತ್ತಿಯ ಲೀಗ್‌ಗೂ ಮುನ್ನ ಈ ಬಾರಿಯ ಲೀಗ್‌ನ ಉಳಿದ ಪಂದ್ಯಗಳನ್ನು ಆಯೋಜಿಸುವ ಬಗ್ಗೆಯೂ ಚಿಂತನೆ ನಡೆಸಿದ್ದೇವೆ. ಪರಿಸ್ಥಿತಿ ಸುಧಾರಿಸಿದರೆ ನವೆಂಬರ್‌ನಲ್ಲೇ ಪಂದ್ಯಗಳನ್ನು ನಡೆಸುತ್ತೇವೆ. ಈ ಬಗ್ಗೆ ಶೀಘ್ರವೇ ಎಲ್ಲಾ ಫ್ರಾಂಚೈಸ್‌ಗಳ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಖಾನ್‌ ಹೇಳಿದ್ದಾರೆ.

‘ಆಟಗಾರರ ಹಿತವೇ ನಮಗೆ ಮುಖ್ಯ. ಇಡೀ ಕ್ರೀಡಾ ಲೋಕವೇ ಈಗ ಸಂಕಷ್ಟದಲ್ಲಿದೆ. ಈ ಪರಿಸ್ಥಿತಿಯನ್ನು ಎಲ್ಲರೂ ದಿಟ್ಟತನದಿಂದ ಎದುರಿಸುವ ಅಗತ್ಯವಿದೆ’ ಎಂದೂ ಅವರು ನುಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT