ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂಟಿಂಗ್‌: ಫೈನಲ್‌ ಕನಸಲ್ಲಿ ಶ್ರೇಯಸಿ

Last Updated 10 ಮಾರ್ಚ್ 2023, 19:31 IST
ಅಕ್ಷರ ಗಾತ್ರ

ದೋಹಾ: ಭಾರತದ ಶ್ರೇಯಸಿ ಸಿಂಗ್‌ ಮತ್ತು ಪೃಥ್ವಿರಾಜ್ ಅವರು ಇಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್‌ ಶಾಟ್‌ಗನ್‌ ವಿಶ್ವಕಪ್‌ನ ಅರ್ಹತಾ ಸುತ್ತಿನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.

ಶ್ರೇಯಸಿ ಅವರು ಮಹಿಳೆಯರ ವಿಭಾಗದಲ್ಲಿ ಆರನೇ ಹಾಗೂ ಪೃಥ್ವಿರಾಜ್‌ ಅವರು ಪುರುಷರ ವಿಭಾಗದ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ ಆಗಿರುವ ಶ್ರೇಯಸಿ 75 ರಲ್ಲಿ 72 ಪಾಯಿಂಟ್ಸ್ ಗಳಿಸಿದರೆ, ಪೃಥ್ವಿರಾಜ್‌ ಒಂದು ಅವಕಾಶದಲ್ಲಿ ಮಾತ್ರ ಗುರಿ ತಪ್ಪಿ 74 ಪಾಯಿಂಟ್ಸ್‌ ಕಲೆಹಾಕಿದರು.

ಪರುಷರ ವಿಭಾಗದಲ್ಲಿ 118 ಹಾಗೂ ಮಹಿಳೆಯರ ವಿಭಾಗದಲ್ಲಿ 62 ಶೂಟರ್‌ಗಳು ಕಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT