ಶನಿವಾರ, ಮೇ 8, 2021
19 °C

ಒಲಿಂಪಿಕ್ಸ್: ಕೋವಿಡ್‌ ತಡೆ ನಿಯಮಗಳಿಗೆ ಆದ್ಯತೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಟೋಕಿಯೊ: ಒಲಿಂಪಿಕ್ಸ್ ಕೂಟವನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಜಪಾನ್ ಸರ್ಕಾರವು ಕೋವಿಡ್‌–19ಕ್ಕೆ ಸಂಬಂಧಿಸಿದ ನಿಯಮಗಳನ್ನು ಇನಷ್ಟು ಕಟ್ಟುನಿಟ್ಟಾಗಿ ಜಾರಿ ಮಾಡುವ ಚಿಂತನೆಯಲ್ಲಿದೆ.

ಒಲಿಂಪಿಕ್ಸ್ ಕ್ರೀಡಾಕೂಟವು ಜುಲೈ 23ರಿಂದ ಆಗಸ್ಟ್ 8ರವರೆಗೆ ನಿಗದಿಯಾಗಿದೆ. ಜಪಾನ್‌ನಲ್ಲಿ ಲಸಿಕೆ ನೀಡುವ ಅಭಿಯಾನ ನಿಧಾನಗತಿಯಲ್ಲಿ ಸಾಗುತ್ತಿದೆ. ಇನ್ನೂ ಹಲವು ನಾಗರಿಕರು ಲಸಿಕೆ ಪಡೆದುಕೊಂಡಿಲ್ಲ.

ಬಾರ್‌ಗಳು ಹಾಗೂ ರೆಸ್ಟೋರೆಂಟ್‌ಗಳ ಕಾರ್ಯನಿರ್ವಹಣಾ ಅವಧಿಯನ್ನು ಕಡಿತಗೊಳಿಸುವುದು, ಕೋವಿಡ್‌ ನಿಯಮಗಳನ್ನು ಉಲ್ಲಂಘಿಸುವ ನಾಗರಿಕರಿಗೆ ಶಿಕ್ಷೆ ಮುಂತಾದ ಕ್ರಮಗಳನ್ನು ಕಡ್ಡಾಯಗೊಳಿಸಲು ಟೋಕಿಯೊ ರಾಜ್ಯಪಾಲರಿಗೆ ಪ್ರಧಾನ ಮಂತ್ರಿ ಯೋಶಿಹಿದೆ ಸುಗಾ  ಸೂಚಿಸಿದ್ದಾರೆ. ಸೋಮವಾರದಿಂದ ಮೇ 11ರವರೆಗೆ ಈ ಕ್ರಮಗಳು ಜಾರಿಯಲ್ಲಿರಲಿವೆ.

ನಗರದಲ್ಲಿ ಇತ್ತೀಚೆಗೆ ಮಧ್ಯರಾತ್ರಿಯ ಜೀವನಶೈಲಿ ಕಾರಣದಿಂದ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆದರೂ ಕಚೇರಿಗಳು, ವೃದ್ಧಾಶ್ರಮಗಳು, ಶಾಲೆಗಳಲ್ಲಿ ಪ್ರಕರಣಗಳು ವ್ಯಾಪಿಸಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು