ಗುರುವಾರ , ಆಗಸ್ಟ್ 13, 2020
29 °C

ಐಒಎಸ್‌ ಜೊತೆ ಜೆರೆಮಿ ಒಪ್ಪಂದ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದ ಪ್ರತಿಭಾನ್ವಿತ ವೇಟ್‌ಲಿಫ್ಟರ್‌ ಜೆರೆಮಿ ಲಾಲ್ರಿನುಂಗಾ ಅವರು ಐಒಎಸ್‌ ಸ್ಪೋರ್ಟ್ಸ್‌ ಆ್ಯಂಡ್‌ ಎಂಟರ್‌ಟೇನ್‌ಮೆಂಟ್‌ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ.

ಈ ಕರಾರಿನ ಅನ್ವಯ ಇನ್ನು ಮುಂದೆ ಜೆರೆಮಿ ಅವರ ಎಲ್ಲಾ ವಾಣಿಜ್ಯ ವ್ಯವಹಾರಗಳನ್ನು ಐಒಎಸ್‌ ನೋಡಿಕೊಳ್ಳಲಿದೆ.

ಅನುಭವಿ ಬಾಕ್ಸರ್‌ಗಳಾದ ಎಂ.ಸಿ.ಮೇರಿ ಕೋಮ್‌, ವಿಜೇಂದರ್‌ ಸಿಂಗ್‌, ಸ್ಪ್ರಿಂಟರ್‌ ಹಿಮಾ ದಾಸ್‌, ಟೇಬಲ್‌ ಟೆನಿಸ್‌ ಆಟಗಾರ್ತಿ ಮಣಿಕಾ ಬಾತ್ರಾ ಮತ್ತು ಅನುಭವಿ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಅವರೂ ಈ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ.

ಮಿಜೋರಾಂ ರಾಜ್ಯದ ಜೆರೆಮಿ ಅವರು ಯೂತ್‌ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಭಾರತದ ಮೊದಲ ವೇಟ್‌ಲಿಫ್ಟರ್‌ ಎಂಬ ಹಿರಿಮೆ ಹೊಂದಿದ್ದಾರೆ. 2018ರಲ್ಲಿ ಅವರಿಂದ ಈ ಸಾಧನೆ ಮೂಡಿಬಂದಿತ್ತು.

ಇತ್ತೀಚೆಗೆ ನಡೆದಿದ್ದ ರಾಷ್ಟ್ರೀಯ ಸೀನಿಯರ್‌ ಚಾಂಪಿಯನ್‌ಷಿಪ್‌ನಲ್ಲಿ ಪುರುಷರ 67 ಕೆ.ಜಿ.ವಿಭಾಗದಲ್ಲಿ ಪಾಲ್ಗೊಂಡಿದ್ದ 17 ವರ್ಷ ವಯಸ್ಸಿನ ಜೆರೆಮಿ  ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದರು.

ಹೋದ ವರ್ಷ ನಡೆದಿದ್ದ ಏಷ್ಯನ್‌ ಯೂತ್‌ ಚಾಂಪಿಯನ್‌ಷಿಪ್‌ನಲ್ಲಿ ಒಟ್ಟು 299 ಕೆ.ಜಿ.ಭಾರ ಎತ್ತಿದ್ದ ಅವರು ತಮ್ಮದೇ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದರು.

‘ಐಒಎಸ್, ಭಾರತದ‌ ಅತ್ಯಂತ ಯಶಸ್ವಿ ಕಂಪನಿ. ಆ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದಕ್ಕೆ ಖುಷಿಯಾಗಿದೆ’ ಎಂದು ಜೆರೆಮಿ ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು