ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ
ಖೆಲೋ ಇಂಡಿಯಾದಲ್ಲಿ ಜಿಯಾ ಆರ್ಯನ್

ಬೆಂಗಳೂರು: ಕುಂದಲಹಳ್ಳಿಯ ರಿಯಾನ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಜಿಯಾ ಆರ್ಯನ್ ಈ ವರ್ಷ ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ನಡೆಯಲಿರುವ ಖೇಲೋ ಇಂಡಿಯಾ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
2019ರ ಫೆಬ್ರುವರಿಯಲ್ಲಿ ಜವಾಹರ್ ಇನ್‌ಸ್ಟಿಟ್ಯೂಟ್ ಆಫ್ ಮೌಂಟೈನೀರಿಂಗ್ ಆ್ಯಂಡ್ ಇಂಟರ್ ಸ್ಪೋರ್ಟ್ಸ್ ನಡೆಸಿದ ಪರೀಕ್ಷೆಯಲ್ಲಿ ಅವರು ತೇರ್ಗಡೆಯಾಗಿದ್ದರು. ಅವರು ಸದ್ಯ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
‘2024ರಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆಯುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪದಕ ಜಯಿಸುವುದೇ ನನ್ನ ಮುಂದಿನ ಗುರಿ’ ಎಂದು ಜಿಯಾ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.