ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ವರ್ಷಕ್ಕೊಮ್ಮೆ ಜೂನಿಯರ್‌ ವಿಶ್ವಕಪ್‌ ಹಾಕಿ

Last Updated 15 ಡಿಸೆಂಬರ್ 2018, 18:30 IST
ಅಕ್ಷರ ಗಾತ್ರ

ಭುವನೇಶ್ವರ: ಇನ್ನು ಮುಂದೆ ಜೂನಿಯರ್‌ ವಿಶ್ವಕಪ್‌ ಹಾಕಿ ಟೂರ್ನಿಯನ್ನು ಎರಡು ವರ್ಷಕ್ಕೊಮ್ಮೆ ನಡೆಸಲು ಅಂತರರಾಷ್ಟ್ರೀಯ ಹಾಕಿ ಫೆಡರೇಷನ್‌ (ಎಫ್‌ಐಎಚ್‌) ತೀರ್ಮಾನಿಸಿದೆ.

ಶುಕ್ರವಾರ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

2016ರಲ್ಲಿ ಲಖನೌದಲ್ಲಿ ಹಿಂದಿನ ಟೂರ್ನಿ ನಡೆದಿತ್ತು. ಆಗ ಭಾರತ ತಂಡ ಪ್ರಶಸ್ತಿ ಜಯಿಸಿತ್ತು. ಮುಂದಿನ ಆವೃತ್ತಿಯ ಪಂದ್ಯಗಳು ಎಲ್ಲಿ ನಡೆಯುತ್ತವೆ ಎಂಬುದನ್ನು ಎಫ್‌ಐಎಚ್ ಬಹಿರಂಗಪಡಿಸಿಲ್ಲ.

‘ಹಾಕಿ ಕ್ರೀಡೆಯ ಅಭಿವೃದ್ಧಿ ಮತ್ತು ಯುವಕರನ್ನು ಈ ಕ್ರೀಡೆಯತ್ತ ಸೆಳೆಯುವ ಉದ್ದೇಶದಿಂದ ಜೂನಿಯರ್‌ ವಿಶ್ವಕಪ್‌ ಟೂರ್ನಿಯನ್ನು ಎರಡು ವರ್ಷಗಳಿಗೊಮ್ಮೆ ಆಯೋಜಿಸಲು ನಿರ್ಧರಿಸಿದ್ದೇವೆ.ಜೂನಿಯರ್‌ ಮತ್ತು ಸೀನಿಯರ್‌ ವಿಶ್ವಕಪ್‌ಗಳ ಆತಿಥ್ಯಕ್ಕಾಗಿ ಈಗಾಗಲೇ ಬಿಡ್‌ ಕರೆಯಲಾಗಿದೆ’ ಎಂದು ಎಫ್‌ಐಎಚ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಥಿಯೆರಿ ವೇಲ್‌ ತಿಳಿಸಿದ್ದಾರೆ.

‘ಹಾಕಿ 5 ಟೂರ್ನಿಯನ್ನು ಇನ್ನಷ್ಟು ಯಶಸ್ವಿಯಾಗಿಸುವ ಬಗ್ಗೆ ಸೂಕ್ತ ರೂಪುರೇಷೆ ಸಿ‌ದ್ಧಪಡಿಸಲಾಗುತ್ತಿದೆ. 2019ರ ಫೆಬ್ರುವರಿಯಲ್ಲಿ ನಡೆಯುವ ಸಭೆಯ ವೇಳೆ ಈ ಕುರಿತು ಚರ್ಚಿಸಲಾಗುತ್ತದೆ. ಜೊತೆಗೆ ರ‍್ಯಾಂಕಿಂಗ್ ಪದ್ಧತಿಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡುವ ಬಗ್ಗೆಯೂ ಚಿಂತಿಸಲಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT