ಭಾನುವಾರ, ಸೆಪ್ಟೆಂಬರ್ 25, 2022
22 °C

ರಾಷ್ಟ್ರೀಯ ಕಬಡ್ಡಿ ಟೂರ್ನಿ | ಆಳ್ವಾಸ್‌ ಸಂಸ್ಥೆಯಲ್ಲಿ ಕಬಡ್ಡಿ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬಿಹಾರದಲ್ಲಿ ನವೆಂಬರ್‌ 1ರಿಂದ 4ರ ವರಗೆ ನಡೆಯಲಿರುವ ಜೂನಿಯರ್ ಬಾಲಕಿಯರ ರಾಷ್ಟ್ರೀಯ ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಳ್ಳುವ ಕರ್ನಾಟಕ ತಂಡದ ಆಯ್ಕೆ ಮತ್ತು ತರಬೇತಿ ಶಿಬಿರ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ.

ಇದೇ 16ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದ್ದು 17ರಿಂದ 28ರ ವರೆಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಆಯ್ಕೆ ಪ್ರಕ್ರಿಯೆಗೆ ಹಾಜರಾಗುವವರು ಬೆಳಿಗ್ಗೆ 8 ಗಂಟೆಯ ಒಳಗೆ ಸ್ಥಳದಲ್ಲಿ ಹಾಜರಿರಬೇಕು. ಪಾಲ್ಗೊಳ್ಳುವವರ ವಯಸ್ಸು ಮುಂಬರುವ ಸೆಪ್ಟೆಂಬರ್ 4ಕ್ಕೆ ಅನ್ವಯವಾಗುವಂತೆ 20 ವರ್ಷ ದಾಟಿರಬಾರದು ಮತ್ತು ದೇಹತೂಕ 65 ಕೆಜಿ ಒಳಗೆ ಇರಬೇಕು. ಆಧಾರ್ ಕಾರ್ಡ್ ಮತ್ತು ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರಗಳನ್ನು ತರಬೇಕು.

ಮಾಹಿತಿಗೆ ಆಳ್ವಾಸ್ ಕಾಲೇಜಿನ ಮಹಿಳಾ ಕಬಡ್ಡಿ ಕೋಚ್ ಹಂಸ ಸಿ (9916087513) ಅಥವಾ ರತನ್ (9448529625) ಅವರನ್ನು ಸಂಪರ್ಕಿಸಬಹುದು ಎಂದು ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯ ಆಡಳಿತಾಧಿಕಾರಿ ಎಸ್‌.ಜಿ.ಮಂಜುನಾಥ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು