ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಕರ್ನಾಟಕ ಮಹಿಳೆಯರು ಸೆಮಿಫೈನಲ್‌ಗೆ

Last Updated 14 ಮೇ 2022, 14:16 IST
ಅಕ್ಷರ ಗಾತ್ರ

ಭೋಪಾಲ್‌: ರೋಚಕ ಶೂಟೌಟ್‌ನಲ್ಲಿ ಪಂಜಾಬ್ ವಿರುದ್ಧ ಗೆಲುವು ಸಾಧಿಸಿದ ಕರ್ನಾಟಕ ತಂಡ ಹಾಕಿ ಇಂಡಿಯಾ ಆಯೋಜಿಸಿರುವ ಮಹಿಳೆಯರ ರಾಷ್ಟ್ರೀಯ ಚಾಂಪಿಯನ್‌ಷಿಪ್‌ನ ಸೆಮಿಫೈನಲ್ ಪ್ರವೇಶಿಸಿತು.

ಶನಿವಾರ ನಡೆದ ಮೂರನೇ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಕರ್ನಾಟಕ 5–4ರಲ್ಲಿ ಜಯ ಗಳಿಸಿತು. ನಿಗದಿತ ಅವಧಿಯಲ್ಲಿ ಉಭಯ ತಂಡಗಳು 1–1 ಗೋಲು ಗಳಿಸಿ ಸಮಬಲ ಸಾಧಿಸಿದ್ದವು.

ಪಂದ್ಯದ ಮೂರನೇ ನಿಮಿಷದಲ್ಲಿ ಮಹಿಮಾ ಗಳಿಸಿದ ಗೋಲಿನೊಂದಿಗೆ ಪಂಜಾಬ್ ಮುನ್ನಡೆ ಸಾಧಿಸಿತ್ತು. 37ನೇ ನಿಮಿಷದಲ್ಲಿ ಲಭಿಸಿದ ಪೆನಾಲ್ಟಿ ಕಾರ್ನರ್ ಅವಕಾಶ ಕರ್ನಾಟಕದ ಕೈ ಹಿಡಿಯಿತು. ಚೆಂಡನ್ನು ಗುರಿ ಮುಟ್ಟಿಸಿ ನಿಶಾ ಸಂಭ್ರಮಿಸಿದರು. ಸೆಮಿಫೈನಲ್ ಪಂದ್ಯಗಳು ಸೋಮವಾರ ನಡೆಯಲಿವೆ.

ಜಾರ್ಖಂಡ್ ಮತ್ತು ಮಹಾರಾಷ್ಟ್ರ ನಡುವಿನ ಕ್ವಾರ್ಟರ್‌ ಫೈನಲ್ ಪಂದ್ಯ ಕೂಡ ಶೂಟೌಟ್‌ನಲ್ಲಿ ಕೊನೆಗೊಂಡಿತು. ಪಂದ್ಯದಲ್ಲಿ ಜಾರ್ಖಂಡ್ 5–4ರಲ್ಲಿ ಗೆದ್ದಿತು. ಹರಿಯಾಣ ಶೂಟೌಟ್‌ನಲ್ಲಿ 3–2ರಲ್ಲಿ ಉತ್ತರ ಪ್ರದೇಶವನ್ನು ಮಣಿಸಿದರೆ ಒಡಿಶಾ 2–0ಯಿಂದ ಮಧ್ಯಪ್ರದೇಶ ವಿರುದ್ಧ ಗೆದ್ದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT