ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಜಿಮ್ ಮತ್ತು ಫಿಟ್‌ನೆಸ್ ಮಾಲೀಕರ ಸಂಘಕ್ಕೆ ಎ.ವಿ. ರವಿ ಅಧ್ಯಕ್ಷ

Last Updated 28 ಜೂನ್ 2020, 7:42 IST
ಅಕ್ಷರ ಗಾತ್ರ

ಬೆಂಗಳೂರು: ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು ಮತ್ತು ಕೋಚ್ ಡಾ. ಎ.ವಿ. ರವಿ ಕರ್ನಾಟಕ ಜಿಮ್ ಮತ್ತು ಫಿಟ್‌ನೆಸ್ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೂ ಆಗಿರುವ ರವಿ, ಕನ್ನಡ ಚಲನಚಿತ್ರಳಲ್ಲಿಯೂ ನಟಿಸಿದ್ದಾರೆ.

’ಕೊರೊನಾ ಸೋಂಕು ತಡೆಗೆ ಲಾಕ್‌ಡೌನ್ ಆದಾಗಿನಿಂದಲೂ ಜಿಮ್ನಾಷಿಯಂಗಳು ಬಂದ್ ಆಗಿವೆ. ಇತ್ತೀಚೆಗೆ ಲಾಕ್‌ಡೌನ್ ಸಡಿಲವಾದಾಗ ಹಲವು ಉದ್ಯಮಗಳು, ಮಾರುಕಟ್ಟೆಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಆರೋಗ್ಯವರ್ಧಿಸುವ ಜಿಮ್‌ಗಳಿಗೆ ಅವಕಾಶ ಕೊಟ್ಟಿಲ್ಲ. ನಾವು ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸಲು ಸಿದ್ಧವಾಗಿದ್ದೇವೆ. ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇವೆ. ಆದರೂ ಇನ್ನೂ ಅನುಮತಿ ಸಿಕ್ಕಿಲ್ಲ. ಇದರಿಂದಾಗಿ ಜಿಮ್‌ಗಳಲ್ಲಿ ಕಾರ್ಯನಿರ್ವಹಿಸುವ ನೂರಾರು ಜನರ ಜೀವನ ತೊಂದರೆಯಲ್ಲಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಪರವಾಗಿ ಕಾರ್ಯ ನಿರ್ವಹಿಸಲು ನಾನು ಬದ್ಧನಾಗಿದ್ದೇನೆ‘ ಎಂದು ರವಿ ಶನಿವಾರ ’ಪ್ರಜಾವಾಣಿ‘ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT