ಶುಕ್ರವಾರ, ಫೆಬ್ರವರಿ 28, 2020
19 °C

ಖೇಲೊ ಇಂಡಿಯಾ: ಮಹಾರಾಷ್ಟ್ರ ಪಾರಮ್ಯ

ಪಿಟಿಐ Updated:

ಅಕ್ಷರ ಗಾತ್ರ : | |

ಗುವಾಹಟಿ : ಮಹಾರಾಷ್ಟ್ರದ ಕ್ರೀಡಾಪಟುಗಳು ಖೇಲೊ ಇಂಡಿಯಾ ಯುವ ಕ್ರೀಡಾಕೂಟದ ಆರನೇ ದಿನವೂ ಪಾರಮ್ಯ ಮೆರೆದಿದ್ದಾರೆ. ವೇಟ್‌ಲಿಫ್ಟರ್‌ಗಳು ಮಿಂಚಿದ ಗುರುವಾರ ಮಹಾರಾಷ್ಟ್ರ  ಐದು ಚಿನ್ನದ ಪದಕಗಳನ್ನು ಗಳಿಸಿಕೊಂಡಿತು.

ಪದಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಹರಿಯಾಣ ಕೂಡ ಗುರುವಾರ ಐದು ಚಿನ್ನದ ಪದಕಗಳನ್ನು ಗೆದ್ದುಕೊಂಡಿತು. ಈ ಪೈಕಿ ಎರಡು ಚಿನ್ನ ಶೂಟಿಂಗ್‌ನಲ್ಲೇ ಲಭಿಸಿತು. ಮಹಾರಾಷ್ಟ್ರದ ಬಗಲಲ್ಲಿ ಈಗ 33 ಚಿನ್ನ ಸೇರಿದಂತೆ 125 ಪದಕಗಳು ಇದ್ದು ಹರಿಯಾಣ 28 ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ. 18 ಚಿನ್ನದೊಂದಿಗೆ ಉತ್ತರ ಪ್ರದೇಶ ಮೂರನೇ ಸ್ಥಾನದಲ್ಲಿದೆ. ದೆಹಲಿ ಹಾಗೂ ಕೇರಳ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನಗಳಲ್ಲಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು