ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘2028ರ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಅಗ್ರ ಹತ್ತರೊಳಗೆ ಸ್ಥಾನ ಪಡೆಯುವ ಗುರಿ’

Last Updated 12 ಜೂನ್ 2020, 15:04 IST
ಅಕ್ಷರ ಗಾತ್ರ

ಮುಂಬೈ: ‘2028ರ ಲಾಸ್‌ ಏಂಜಲಿಸ್‌ ಒಲಿಂಪಿಕ್ಸ್‌ನ ಪದಕ ಪಟ್ಟಿಯಲ್ಲಿ ಭಾರತವು ಅಗ್ರ ಹತ್ತರೊಳಗೆ ಸ್ಥಾನ ಪಡೆಯಬೇಕೆಂಬ ಮಹದಾಸೆ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು ನಾವು ಹಲವು ಯೋಜನೆಗಳನ್ನು ರೂಪಿಸುತ್ತಿದ್ದೇವೆ’ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ.

ಹಿರಿಯ ಟೇಬಲ್‌ ಟೆನಿಸ್‌ ಆಟಗಾರ ಮುದಿತ್‌ ದಾನಿ ಅವರೊಂದಿಗಿನ ಇನ್‌ಸ್ಟಾಗ್ರಾಮ್‌ ಸಂವಾದದಲ್ಲಿ ಭಾಗವಹಿಸಿದ್ದ ರಿಜಿಜು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಒಲಿಂ‍ಪಿಕ್ಸ್‌ನಲ್ಲಿ ಪಾಲ್ಗೊಳ್ಳುವುದಷ್ಟೇ ನಮ್ಮ ಗುರಿಯಾಗಿರಬಾರದು. ಕೂಟದಲ್ಲಿ ಭಾರತ ಅತಿ ಹೆಚ್ಚು ಪದಕಗಳನ್ನು ಗೆಲ್ಲುವಂತಾಗಬೇಕು. ಹೀಗಾಗಿಯೇ ಖೇಲೊ ಇಂಡಿಯಾ ಕ್ರೀಡಾಕೂಟ, ಫಿಟ್‌ ಇಂಡಿಯಾ ಅಭಿಯಾನವನ್ನು ಆರಂಭಿಸಿದ್ದೇವೆ. ಇವುಗಳು ಪ್ರತಿಭಾನ್ವೇಷಣೆಗೆ ಪೂರಕವಾಗಿವೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT