ಸೋಮವಾರ, ಮಾರ್ಚ್ 30, 2020
19 °C

ಕೊಡವ ಕೌಟುಂಬಿಕ ಹಾಕಿ ಉತ್ಸವ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಪ್ರತಿ ವರ್ಷ ಏಪ್ರಿಲ್‌, ಮೇನಲ್ಲಿ ನಡೆಯುತ್ತಿದ್ದ ‘ಕೊಡವ ಕೌಟುಂಬಿಕ ಹಾಕಿ ಉತ್ಸವ’ ಈ ವರ್ಷವೂ ರದ್ದಾಗಿದೆ.

‘ಕಳೆದ ವರ್ಷ ಪ್ರಕೃತಿ ವಿಕೋಪದಿಂದ ಹಾಕಿ ಉತ್ಸವ ರದ್ದಾಗಿತ್ತು. ಈ ವರ್ಷ ಕೊರೊನಾ ವೈರಸ್ ಭೀತಿಯು ಉತ್ಸವದ ಸಂಭ್ರಮವನ್ನು ಕಸಿದಿದೆ. ಹೀಗಾಗಿ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ’ ಎಂದು ಮುಕ್ಕಾಟಿರ ಹಾಕಿ ನಮ್ಮೆ ಅಧ್ಯಕ್ಷ ಮುಕ್ಕಾಟಿರ ಚೋಟು ಉತ್ತಯ್ಯ ಮಂಗಳವಾರ ತಿಳಿಸಿದರು.

ಏ.19ರಿಂದ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡುವಿನಲ್ಲಿ ಹಾಕಿ ಉತ್ಸವ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಕೊಡವ ಕುಟುಂಬದ ಹಲವು ತಂಡಗಳು ಹೆಸರು ನೋಂದಣಿ ಮಾಡಿಕೊಂಡಿದ್ದವು. ಎರಡು ಪ್ರತ್ಯೇಕ ಮೈದಾನಗಳಲ್ಲಿ ಪಂದ್ಯ ನಡೆಸಲು ಮುಕ್ಕಾಟಿರ ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು